ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐಗೆ ವಹಿಸಲಿ: ಅಶ್ವಥ್ ನಾರಾಯಣ್

Public TV
1 Min Read
ASHWATH NARAYAN

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಎಡವಟ್ಟುಗಳ ಸರ್ಕಾರ. ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ (Ashwath Narayan) ಅವರು ಟೀಕಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ (BJP) ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿ, ಐಟಿ ದಾಳಿ ಸಂಬಂಧ ಸಿಬಿಐ (CBI) ತನಿಖೆ ಮಾಡಿ ಹಣದ ಮೂಲವನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದರು. ನಾಚಿಕೆ ಇಲ್ಲದ ಸರ್ಕಾರ ಇದು. ಪ್ರತಿಯೊಂದು ವಿಚಾರದಲ್ಲೂ ನಾಡಿಗೇ ಸಂಕಷ್ಟ ತಂದಿಟ್ಟ ಕಾಂಗ್ರೆಸ್ (Congress Govt) ಸರ್ಕಾರ ಇದಾಗಿದೆ. ಈ ಸರ್ಕಾರ ತೊಲಗುವುದನ್ನೇ ಜನ ಬಯಸುತ್ತಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ರಾಜೀನಾಮೆಗೆ ಅವರು ಆಗ್ರಹಿಸಿದರು.

ಸಾಕಷ್ಟು ಆಡಳಿತ ಅನುಭವ, ಪರಿಣತಿ ಇದ್ದರೂ, ಭಾರೀ ಬಹುಮತ ಸಿಕ್ಕಿದರೂ ಜನಾಶೀರ್ವಾದಕ್ಕೆ ತಕ್ಕ ಗೌರವವನ್ನು ನೀಡಿಲ್ಲ. ನಾಮಕಾವಾಸ್ತೆಗೆ ಕೆಲವು ಭಾಗ್ಯಗಳನ್ನು ತೋರಿಸಿ ಲೂಟಿ ಸರ್ಕಾರವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸರ್ಕಾರ ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಕೊಡಬೇಕು: ಜಿಟಿ ದೇವೇಗೌಡ

ರಾಜ್ಯವನ್ನು ಲೂಟಿ ಮಾಡಲು ಮತ್ತು ಸ್ವಾರ್ಥದಾಹ ಹಿಂಗಿಸಲು ಈ ಸರ್ಕಾರ ಮುಂದಾಗಿದೆ. ಏನೇ ಆಪಾದನೆಗೂ ಅದು ಜಗ್ಗುತ್ತಿಲ್ಲ. ಭಂಡತನದ ಉತ್ತರವನ್ನು ನೀಡುತ್ತಿದ್ದಾರೆ. ಗುತ್ತಿಗೆದಾರರು, ಬಿಲ್ಡರ್‍ಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ಷೇಪಿಸಿದರು.

ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಭಾಸ್ಕರ ರಾವ್, ನೆ.ಲ.ನರೇಂದ್ರ ಬಾಬು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಜಿಲ್ಲಾ ಅಧ್ಯಕ್ಷ ಮಂಜುನಾಥ ಜಿ, ನಾರಾಯಣ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Web Stories

Share This Article