ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ

Public TV
1 Min Read
BNG CM IBRAHIM 2

ಬೆಂಗಳೂರು: ಜೆಡಿಎಸ್‌ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ.

ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

CM Ibrahim meeting

ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.  ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.

 

 

Web Stories

Share This Article