ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ – ನದಿಗೆ ಎಸೆಯಲು ಪ್ಲಾನ್

Public TV
1 Min Read
Vijay Ratod

ಯಾದಗಿರಿ: ಅಕ್ರಮ ಮರಳು ದಂಧೆಯನ್ನು (Illegal Sand Trade) ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶಹಾಪುರದ (Shahapur) ವಿಭೂತಳ್ಳಿ ಬಳಿ ನಡೆದಿದೆ.

ರಾಜು ನಡಿಹಾಳ್ ಹಾಗೂ ಶರಣಗೌಡ ಹಯ್ಯಾಳ ಹಲ್ಲೆಗೊಳಗಾದವರು. ರೌಡಿ ಶೀಟರ್ ವಿಜಯ ರಾಠೋಡ್ ಹಾಗೂ ಇತರರಿಂದ ಅಪಹರಣ ನಡೆದಿದೆ ಎಂದು ಆರೋಪಿಸಲಾಗಿದೆ. ವಿಜಯ ರಾಠೋಡ್ ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದು, ಸಚಿವ ಶರಣಬಸಪ್ಪ ದರ್ಶನಾಪೂರ ಬೆಂಬಲಿಗ ಎಂಬ ಮಾತುಗಳು ಕೇಳಿ ಬಂದಿವೆ. ಇದನ್ನೂ ಓದಿ: ಜಿಂಕೆ ತಪ್ಪಿಸಲು ಹೋಗಿ ಕಾರು ಅಪಘಾತ: ಮೂವರು ಗಂಭೀರ

ಆರೋಪಿಗಳು ಇಬ್ಬರನ್ನೂ ಕಾರಿನಲ್ಲಿ ಅಪಹರಿಸಿ ಡಿಕ್ಕಿಯೊಳಗೆ ಹಾಕಿ, ರಾಡ್‍ನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಇಬ್ಬರನ್ನೂ ಜೀವಂತವಾಗಿ ನದಿಗೆ ಎಸೆಯಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಸ್ಥಳೀಯರು ಗಮನಿಸಿದ್ದರಿಂದ ಇಬ್ಬರನ್ನೂ ಬಿಟ್ಟು ಹೋಗಿದ್ದಾರೆ. ಹಲ್ಲೆಗೊಳಗಾದ ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದ ಎ1 ಆರೋಪಿ ಬಸುರೆಡ್ಡಿ ಮಲ್ಲಾಬಾದ್ ಎಂಬಾತ ಕೃಷ್ಣಾ ನದಿಯಲ್ಲಿ ಅಕ್ರಮ ಮರಳು ದಂಧೆ ಮಾಡುತ್ತಿದ್ದ. ಇದನ್ನು ರಾಜು ಹಾಗೂ ಶರಣಗೌಡ ಪ್ರಶ್ನಿಸಿದ್ದರು. ಇದೇ ಕಾರಣಕ್ಕೆ ಬಸುರೆಡ್ಡಿಯ ಸ್ನೇಹಿತನಾದ ವಿಜಯ ರಾಠೋಡ್ ಹಾಗೂ ಆತನ ಸಹಚರರು ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದರಲ್ಲಿ ಶರಣಗೌಡ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ರಾಜುವಿನ ಎರಡೂ ಕಾಲುಗಳಿಗೆ ಬಲವಾದ ಪೆಟ್ಟು ಬಿದ್ದಿದೆ. ಘಟನೆ ನಡೆದು ನಾಲ್ಕು ದಿನಗಳ ನಂತರ ರಾಜುವಿನ ತಂದೆ ಬಸಯ್ಯ ಗುತ್ತೇದಾರ ನೀಡಿರುವ ದೂರಿನ ಮೇಲೆ ಶಹಾಪುರ ಪೊಲೀಸ್ ಠಾಣೆಯಲ್ಲಿ ವಿಜಯ ರಾಠೋಡ್, ಬಸುರೆಡ್ಡಿ, ಮಲ್ಲಿಕಾರ್ಜುನ, ಸೇರಿದಂತೆ ಏಳು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಮಾಸ್ ಉಗ್ರರ ಕಾರ್ಯತಂತ್ರವನ್ನೇ ಅನುಸರಿಸಿದ ಇಸ್ರೇಲ್ – ಇಂದು ಇಬ್ಬರು ಒತ್ತೆಯಾಳುಗಳ ರಿಲೀಸ್‌ಗೆ ಸಿದ್ಧತೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article