ಶ್ರೀನಿವಾಸ್ ಹತ್ಯೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಗುಂಡೇಟು

Public TV
1 Min Read
Police firing

ಕೋಲಾರ: ಕಾಂಗ್ರೆಸ್ (Congress) ಮುಖಂಡ ಕೌನ್ಸಿಲರ್ ಶ್ರೀನಿವಾಸ್ (shrinivas) ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕರೆತರುವ ವೇಳೆ ಪೊಲೀಸರ (Police) ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ವೇಮಗಲ್ ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ವೆಂಕಟೇಶ್ ಗುಂಡು ಹಾರಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿ ಕರೆತರುವ ವೇಳೆ ಲಕ್ಷ್ಮೀಸಾಗರ ಅರಣ್ಯ ಪ್ರದೇಶದ ಬಳಿ ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಇಬ್ಬರ ಕಾಲಿಗೆ ಗುಂಡು ಹಾರಿಸಲಾಗಿದೆ. ಈ ವೇಳೆ ಮತ್ತೊಬ್ಬ ಆರೋಪಿ ಸಂತೋಷ್‍ಗೂ ಗಾಯವಾಗಿದೆ. ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ ಬರ್ಬರ ಹತ್ಯೆ

ಆರೋಪಿಗಳು ನಡೆಸಿದ ಹಲ್ಲೆಯಿಂದ ಇನ್ಸ್‌ಪೆಕ್ಟರ್ ವೆಂಕಟೇಶ್, ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ದುಷ್ಕರ್ಮಿಗಳು ಪರಿಚಯಸ್ಥರಂತೆ ಮಾತಾಡಿಸಿ ಚಾಕು ಇರಿದು ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರ ಪೈಕಿ ಮೂವರು ಜನ ಪ್ರಮುಖ ಆರೋಪಿಗಳ ಬಂಧನವಾಗಿದೆ. ಇದನ್ನೂ ಓದಿ: ಮಹಿಳೆಯ ಹಸ್ತಕ್ಷೇಪದಿಂದ ಇಕ್ಕಟ್ಟಿಗೆ ಸರ್ಕಾರ – ದೇವರಗುಡ್ಡದ ಐತಿಹಾಸಿಕ ಕಾರ್ಣಿಕ

Web Stories

Share This Article