ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನೊಬ್ಬನ ಕತ್ತಿಗೆ ಏಟು ಬಿದ್ದ ಘಟನೆಯೊಂದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಈ ಅವಘಡ ಸಂಭವಿಸಿದೆ. ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯತಪ್ಪಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದೆ.
ತಕ್ಷಣ ಆಸ್ಪತ್ರೆಗೆ ದಾಖಲಿಸಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಯುವಕ ಅಪಾಯದಿಂದ ಪಾರಾಗಿದ್ದಾರೆ. ನಿರಂತರ ಅಭ್ಯಾಸದ ಜೊತೆಗೆ ಹಲವು ವರ್ಷಗಳಿಂದ ಹುಲಿವೇಷ ಕಸರತ್ತು ನಡೆಸುತ್ತಿದ್ದರು. ಇದನ್ನೂ ಓದಿ: ಕಾಗೇರಿಗೊಂದು ನ್ಯಾಯ ಹೆಬ್ಬಾರ್‌ಗೊಂದು ನ್ಯಾಯ- ಸಿಡಿದೆದ್ದ ಹೆಬ್ಬಾರ್ ಅಭಿಮಾನಿಗಳು?
ಇದೀಗ ನವರಾತ್ರಿ ಹಿನ್ನೆಲೆ ಹುಲಿವೇಷ ಧರಿಸಿ ಕುಣಿತ ಮತ್ತು ಕಸರತ್ತು ಪ್ರದರ್ಶಿಸುವ ಸಂಪ್ರದಾಯವಿದೆ. ಅಂತೆಯೇ ಮಂಗಳಾದೇವಿ ದೇವರ ಎದುರು ಕಸರತ್ತು ನಡೆಸುತ್ತಿದ್ದ ವೇಳೆ ಭಾರೀ ಅವಘಡದಿಂದ ಪಾರಾಗಿದ್ದಾರೆ.
Web Stories