ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಪುಟಿನ್ ದೇಹವನ್ನು ಡಬಲ್ ಮಾಡಲಾಗಿದೆ ಎಂಬ ಆರೋಪಗಳನ್ನು ಕ್ರೆಮ್ಲಿನ್ (Kremlin) ತಳ್ಳಿಹಾಕಿದ್ದು, ಪುಟಿನ್ ಆರೋಗ್ಯವಾಗಿದ್ದಾರೆ ಎಂದು ಹೇಳಿದೆ.
ಭಾನುವಾರ ಸಂಜೆ ಪುಟಿನ್ ಹೃದಯ ಸ್ತಂಭನಕ್ಕೆ (Cardiac Arrest) ಒಳಗಾಗಿರುವುದಾಗಿ SVR ಟೆಲಿಗ್ರಾಮ್ ಚಾನೆಲ್ ವರದಿ ಮಾಡಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕ್ರೆಮ್ಲಿನ್ ವಕ್ತಾರ ಪೆಸ್ಕೋವ್, ಪುಟಿನ್ ಆರೋಗ್ಯವಾಗಿದ್ದಾರೆ, ಬಾಡಿ ಡಬಲ್ ಮಾಡಲಾಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ – ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಅಭಿಮನ್ಯು
ಪುಟಿನ್ ಹೃದಯ ಸ್ತಂಭನಕ್ಕೆ ಒಳಗಾಗಿದ್ದಾರೆ ಎನ್ನುತ್ತಿರುವುದು ಶುದ್ಧ ಸುಳ್ಳು. ಇದಕ್ಕೆ ನಗಬೇಕೋ ಅಳಬೇಕೋ ಎಂಬುದೇ ತಿಳಿಯುತ್ತಿಲ್ಲ. ಬೇರೆ ಯಾವುದೇ ಪ್ರತಿಕ್ರಿಯೆ ಕೊಡಲು ನನ್ನಿಂದ ಸಾಧ್ಯವಿಲ್ಲ ಎಂದು ಕ್ರೆಮ್ಲಿನ್ ವಕ್ತಾರ ಪೆಸ್ಕೋವ್ ಹೇಳಿದ್ದಾರೆ. ಇದನ್ನೂ ಓದಿ: ಕಾಗೇರಿಗೊಂದು ನ್ಯಾಯ ಹೆಬ್ಬಾರ್‌ಗೊಂದು ನ್ಯಾಯ- ಸಿಡಿದೆದ್ದ ಹೆಬ್ಬಾರ್ ಅಭಿಮಾನಿಗಳು?
ಪುಟಿನ್ ಅಕ್ಟೋಬರ್ 7ರಂದು 71ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ನಿರಂತರವಾಗಿ ಸಾರ್ವಜನಿಕ ಸಭೆಗಳು ಹಾಗೂ ನಿಗದಿತ ವೇಳಾಪಟ್ಟಿಯಂತೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅವುಗಳಲ್ಲಿ ಹಲವು ಕಾರ್ಯಕ್ರಮಗಳು ಟಿವಿಗಳಲ್ಲಿ ಪ್ರಸಾರವಾಗುತ್ತಿವೆ. ಇತ್ತೀಚೆಗೆ ಚೀನಾಗೆ ಭೇಟಿ ನೀಡಿ ಬರುತ್ತಿದ್ದಾಗಲೂ ರಷ್ಯಾದ ಎರಡು ನಗರಗಳಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿಯೂ ನಡೆದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು ಎಂದು ಪುಟಿನ್ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಹೃದಯ ಸ್ತಂಭನ – ಭದ್ರತಾ ಸಿಬ್ಬಂದಿ ಹೇಳಿದ್ದೇನು?
ಎಸ್‌ವಿಆರ್ ವರದಿ ಮಾಡಿದ್ದೇನು?
ಭಾನುವಾರ ಸಂಜೆ ವ್ಲಾಡಿಮಿರ್ ಪುಟಿನ್ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ವ್ಲಾಡಿಮಿರ್ ಪುಟಿನ್ ಭಾನುವಾರ ರಾತ್ರಿ 9 ಗಂಟೆಯ ಸುಮಾರಿಗೆ ತನ್ನ ಮಲಗುವ ಕೋಣೆಯಲ್ಲೇ ನೆಲದ ಮೇಲೆ ಆಹಾರ ಮತ್ತು ಪಾನೀಯಗಳೊಂದಿಗೆ ಮಗುಚಿಕೊಂಡಿದ್ದ ಟೇಬಲ್ ಪಕ್ಕದಲ್ಲಿ ಬಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಪುಟಿನ್ ಬಿದ್ದಾಗ, ಟೇಬಲ್ ಮತ್ತು ಅದರ ಮೇಲಿದ್ದ ಆಹಾರ, ಡ್ರಿಂಕ್ಸ್ ಬಾಟಲಿಗಳು ಟೇಬಲ್‌ನಿಂದ ಕೆಳಗೆ ಬಿದ್ದಿದ್ದವು. ಅದರಿಂದ ದೊಡ್ಡ ಶಬ್ಧ ಉಂಟಾಗಿತ್ತು. ಭದ್ರತಾ ಸಿಬ್ಬಂದಿ ತಕ್ಷಣ ಅಲ್ಲಿಗೆ ಧಾವಿಸಿದಾಗ ಪುಟಿನ್ ನೆಲದ ಮೇಲೆ ಬಿದ್ದು, ನೋವಿನಿಂದ ನರಳುತ್ತಿರುವುದು ಕಂಡುಬಂದಿತ್ತು. ಕೂಡಲೇ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಕಾರ್ಯಪ್ರವೃತ್ತರಾಗಿ ತುರ್ತು ಚಿಕಿತ್ಸೆ ನೀಡಿದ್ದರು. ನಂತರ ಪುಟಿನ್‌ರನ್ನ ಅವರ ನಿವಾಸದಲ್ಲೇ ವಿಶೇಷವಾಗಿ ಸುಸಜ್ಜಿತ ಕೋಣೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿರುವ ವಿಶೇಷ ಐಸಿಯು ಘಟಕಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಪ್ರಥಮ ಚಿಕಿತ್ಸೆ ನೀಡಿದ್ದರಿಂದಾಗಿ ಮತ್ತೆ ಅವರ ಹೃದಯ ಆರೋಗ್ಯ ಸ್ಥಿತಿಗೆ ಬಂದಿದೆ ಎಂದು ಟೆಲಿಗ್ರಾಮ್ ಚಾನೆಲ್ ವರದಿ ಮಾಡಿತ್ತು.
Web Stories