ಹುಲಿ ಉಗುರು ಪ್ರಕರಣ – ಸ್ಯಾಂಡಲ್‌ವುಡ್ ನಟರ ಬಳಿಕ ರಾಜಕಾರಣಿಗಳಿಗೂ ಸಂಕಷ್ಟ

Public TV
1 Min Read
tiger claw 2

ಬೆಂಗಳೂರು: ಹುಲಿ ಉಗುರು (Tiger Claw) ಪೆಂಡೆಂಟ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟರ ಬಳಿಕ ಈಗ ರಾಜಕಾರಣಿಗಳಿಗೂ ಸಂಕಷ್ಟ ಶುರುವಾಗಿದೆ. ಕೆಲ ರಾಜಕಾರಣಿಗಳ ಆಪ್ತರು, ಮಕ್ಕಳು ಹುಲಿ ಉಗುರಿನ ಸುಳಿಯಲ್ಲಿ ಸಿಲುಕಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್, ಹುಬ್ಬಳ್ಳಿ ಕಾಂಗ್ರೆಸ್ ಯುವ ನಾಯಕ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂಬಂಧಿ ರಜತ್ ಉಳ್ಳಾಗಡ್ಡಿಮಠ ಮದುವೆ ವೇಳೆ ವ್ಯಾಘ್ರನಖ ಮಾದರಿ ಪೆಂಡೆಂಟ್ ಧರಿಸಿದ್ದ ಫೋಟೋಗಳು ವೈರಲ್ ಆಗಿವೆ. ಈ ವಿಚಾರದಲ್ಲಿ ಅರಣ್ಯ ಅಧಿಕಾರಿಗಳ ನಡೆ ಕುತೂಹಲ ಕೆರಳಿಸಿದೆ.

tiger claw 1

ವಿಜಯಪುರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಪುತ್ರನ ಕೊರಳಲ್ಲಿ ವ್ಯಾಘ್ರನಖ ಮಾದರಿ ಕಂಡುಬಂದ ಕಾರಣ ಅರಣ್ಯಾಧಿಕಾರಿಗಳು, ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾಕೆಟ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಇದನ್ನೂ ಓದಿ: PublicTV Explainer: ಉಗುರಿಗೆ ಹೆದರಿದ ‘ಹೀರೋಸ್‌’; ವನ್ಯಜೀವಿ ಸಂರಕ್ಷಣಾ ಕಾಯ್ದೆ ಏನು ಹೇಳುತ್ತೆ? – ಅಪರಾಧಕ್ಕೆ ಶಿಕ್ಷೆ ಏನು?

ಕಾಂಗ್ರೆಸ್ ಮುಖಂಡ ಜೇಡರಹಳ್ಳಿ ಕೃಷ್ಣಪ್ಪನ ಆರ್‌ಆರ್ ನಗರದ ಮನೆಯನ್ನು ಇದೇ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ರೇಡ್ ಮಾಡಿದರು. ಬರೀ ಇವರಷ್ಟೇ ಅಲ್ಲ, ಉದ್ಯಮಿ ಚೇತನ್, ಬೈರತಿ ಸುರೇಶ್ ಸಂಬಂಧಿ, ಮಾಜಿ ಮಂತ್ರಿ ಜಿಟಿ ದೇವೇಗೌಡ ಆಪ್ತ ಶ್ರೀಧರ್ ನಾಯಕ್ ಕೊರಳಲ್ಲಿ ವ್ಯಾಘ್ರನಖ ಮಾದರಿ ಲಾಕೆಟ್ ಇರೋ ಫೋಟೋಗಳು ವೈರಲ್ ಆಗಿವೆ. ಇದನ್ನೂ ಓದಿ: ಕಲ್ಲಾಗಿ ಬದಲಾದ ಏಡಿ – ಅಘನಾಶಿನಿ ನದಿಯಲ್ಲಿ ವಿಸ್ಮಯ

Web Stories

Share This Article