ಹುಲಿ ಉಗುರಿನ ಕಂಟಕ – ಅರಣ್ಯಾಧಿಕಾರಿ ಬಂಧನ

Public TV
1 Min Read
Forest Officer

ಚಿಕ್ಕಮಗಳೂರು: ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ಕಳಸದ (Kalasa) ಅರಣ್ಯಾಧಿಕಾರಿಯೊಬ್ಬರು ಹುಲಿ ಉಗುರು (Tiger Claw) ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದರು. ಈಗ ಅವರನ್ನು ಎನ್‌ಆರ್‌ಪುರದಲ್ಲಿ ಬಂಧಿಸಲಾಗಿದೆ.

ಕಳಸದ ಡಿಆರ್‌ಎಫ್‌ಓ ದರ್ಶನ್ ಅವರನ್ನು ಬೆಳಗ್ಗೆ ಅಮಾನತು ಮಾಡಲಾಗಿತ್ತು. ಇವರ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿತ್ತು. ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಇಲಾಖೆ (Forest Department) ಸೂಚಿಸಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪ್ರಸಾದ್ ಬಿದ್ದಪ್ಪನ ಪುತ್ರನಿಂದ ಪೊಲೀಸರಿಗೆ ಅವಾಜ್

ಅಧಿಕಾರಿ ವಿರುದ್ಧ, ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಲಿಖಿತ ದೂರು ನೀಡಲಾಗಿತ್ತು. ಅಲ್ಲದೇ ವನ್ಯ ಜೀವಿ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೊಪ್ಪದ ಡಿಎಫ್‍ಓ ನಂದೀಶ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಈಗ ಅಧಿಕಾರಿಯ ಬಂಧನವಾಗಿದೆ.

ಅರೆನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬವರು ಆಲ್ದೂರು ವಲಯ ಅರಣ್ಯಾಧಿಕಾರಿಗೆ ಈ ಸಂಬಂಧ ದೂರು ನೀಡಿದ್ದರು. ಇದನ್ನೂ ಓದಿ: ವಿಜಯದಶಮಿ ವೇಳೆ ಪಲ್ಲಕ್ಕಿ ತಡೆದು ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ ಕಿಡಿಗೇಡಿಗಳು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article