ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ- ಶಾಸಕರಿಗೆ ಡಿಕೆಶಿ ಖಡಕ್ ಎಚ್ಚರಿಕೆ

Public TV
1 Min Read
DKSHI 4 e1698465996919

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ತಮ್ಮ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ಶಾಸಕರಿಗೆ ಆಫರ್ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ. ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಾ ಇದ್ದಾರೆ. ಬಹಳ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಹೇಳಿದರು.

ನಮ್ಮ ಶಾಸಕರು ಯಾರೇ ಆಗಲಿ, ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬಾರದು. ಪಕ್ಷದ ಆಂತರಿಕ ವಿಚಾರ, ಅಧಿಕಾರ ವಿಚಾರ ಯಾವುದೇ ಹೇಳಿಕೆಗಳನ್ನು ಕೊಡಬಾರದು. ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ. ಪದೇ ಪದೇ ಈ ರೀತಿಯ ಹೇಳಿಕೆಗಳನ್ನು ಕೊಟ್ಟಲ್ಲಿ ನೋಟಿಸ್ ಕೊಡ್ತೇನೆ ಎಂದು ಡಿಕೆಶಿ ತಮ್ಮ ಶಾಸಕರಿಗೆ ಎಚ್ಚರಿಕೆ ನೀಡಿದರು.

Web Stories

Share This Article