ತಿರುವನಂತಪುರಂ: ಕೇರಳದ ಕಲಮಶ್ಯೇರಿಯಲ್ಲಿ (Kalamassery, Kerala) ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಅಮಿತ್ ಶಾ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಸಮಾವೇಶ ಕೇಂದ್ರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಷ್ಟ್ರೀಯ ತನಿಖಾ ದಳ (NIA) ಮತ್ತು ರಾಷ್ಟ್ರೀಯ ಭದ್ರತಾ ಪಡೆ (NSG) ಸ್ಥಳಕ್ಕಾಗಮಿಸಿ ಘಟನೆಯ ಕುರಿತು ತನಿಖೆ ಆರಂಭಿಸುವಂತೆ ಸೂಚನೆ ನೀಡಿದರು.
ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಶವಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 2,500 ಮಂದಿ ಪಾಲ್ಗೊಂಡಿದ್ದರು. ಈ ವೇಳೆ ಪ್ರೇಯರ್ ಹಾಲ್ ನಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈಗಾಗಲೇ 36 ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 10 ಮಂದಿಗೆ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ
ಘಟನೆ ನಡೆಯುತ್ತಿದ್ದಂತೆಯೇ ಬೆದರಿ ಜನ ದಿಕ್ಕಾಪಾಲಾಗಿ ಓಡಿ ಹೋದರು. ಸದ್ಯ 4 ಸದಸ್ಯರ ಎನ್‍ಐಎ ತಂಡವು ಸ್ಥಳೀಯ ಪೊಲೀಸರೊಂದಿಗೆ ಸ್ಥಳದಲ್ಲಿ ಬೀಡುಬಿಟ್ಟಿದೆ. ಪ್ರಾಥಮಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ಎನ್‍ಐಎ, ಬಾಂಬ್ ಬ್ಲಾಸ್ಟ್ ಹಿಂದಿನ ಸೂತ್ರಧಾರಿಗಳು ಯಾರು ಅನ್ನೋದರ ಬಗ್ಗೆ ತನಿಖೆ ಆರಂಭಿಸಿದೆ.
Web Stories