ನಾರಾಯಣ ಮೂರ್ತಿ ವಾರಕ್ಕೆ 80 ರಿಂದ 90 ಗಂಟೆ ಕೆಲಸ ಮಾಡಿದ್ದಾರೆ : ಪತಿಯ ಸಲಹೆಗೆ ಸುಧಾ ಮೂರ್ತಿ ಸಮರ್ಥನೆ

Public TV
2 Min Read
Sudha Murty

ಮುಂಬೈ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು ಎಂದು ಇನ್ಫೋಸಿಸ್‌ (Infosys) ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅವರ ಸಲಹೆಯನ್ನು ಪತ್ನಿ ಸುಧಾ ಮೂರ್ತಿ (Sudha Murthy) ಸಮರ್ಥಿಸಿಕೊಂಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ನಾರಾಯಣ ಮೂರ್ತಿ ವಾರಕ್ಕೆ 80 ರಿಂದ 90 ಗಂಟೆ ಕೆಲಸ ಮಾಡಿದ್ದಾರೆ. ಈಗ ಅವರು ತಮ್ಮ ಅನುಭವವನ್ನು ಮಾತ್ರ ಹಂಚಿಕೊಂಡಿದ್ದಾರೆ. ಅವರು ಏನು ನುಡಿಯುತ್ತಾರೋ ಅದರಂತೆ ಬಾಳುತ್ತಾರೆ. ನುಡಿದಂತೆ ನಡೆಯುವ ವ್ಯಕ್ತಿ ಎಂದು ಪತಿಯ ಕೆಲಸವನ್ನು ಮೆಚ್ಚಿಕೊಂಡರು.

ನಾರಾಯಣ ಮೂರ್ತಿ ನಿಜವಾದ ದುಡಿಮೆಯನ್ನೇ ನಂಬಿ ಬದುಕಿದ್ದಾರೆ. ಹೀಗಾಗಿ ತನಗೆ ಅನಿಸಿದ್ದನ್ನು ಅವರು ಹೇಳಿದ್ದಾರೆ. ಕಠಿಣ ಪರಿಶ್ರಮದಲ್ಲಿ ನಾರಾಯಣ ಮೂರ್ತಿ ನಂಬಿಕೆ ಇಡುತ್ತಾರೆ ಎಂದು ತಿಳಿಸಿದರು.  ಇದನ್ನೂ ಓದಿ: Kerala Bomb Blast: ಅತ್ತೆ ಕುಳಿತಿದ್ದ ಜಾಗ ತಪ್ಪಿಸಿ ಬಾಂಬ್ ಇಟ್ಟಿದ್ದೆ: ಆರೋಪಿ ಬಾಯ್ಬಿಟ್ಟ ಸತ್ಯವೇನು?

Infosys founder Narayana Murthy Suggests 70 Hour Work Week To Youngsters Sparks Debate

ನಾನು ಪತಿಯಿಂದ ಬಹಳಷ್ಟು ವಿಷಯಗಳನ್ನು ಕಲಿತ್ತಿದ್ದೇನೆ. ಅದರಲ್ಲೂ ಒಂದು ಗುರಿಯನ್ನು ಇಟ್ಟುಕೊಂಡು ಅದಕ್ಕಾಗಿ ಅವರು ಕೆಲಸ ಮಾಡಿದ್ದಾರೆ. ಕೆಲಸ ಮಾಡಲು ನೀವು ಉತ್ಸಾಹವನ್ನು ಹೊಂದಿದ್ದರೆ ಮಾತ್ರ ನೀವು ಸಾಧನೆ ಮಾಡುತ್ತೀರಿ.  ನಿಮ್ಮ ಬುದ್ಧಿವಂತಿಕೆ ಅಥವಾ ಕಠಿಣ ಪರಿಶ್ರಮದಿಂದ ಯಶಸ್ಸು ಸಿಗುವುದಿಲ್ಲ. ಆದರೆ ಸ್ಮಾರ್ಟ್‌ ಬುದ್ಧಿವಂತ ಪರಿಶ್ರಮ ಇದ್ದಲ್ಲಿ ಖಂಡಿತ ಯಶಸ್ಸು ಸಿಗುತ್ತದೆ ಎಂದು ಹೇಳಿದರು.

ನಾರಾಯಣ ಮೂರ್ತಿ ಹೇಳಿದ್ದೇನು?
ಭಾರತದ (India) ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ (Youngsters) ವಾರಕ್ಕೆ 70 ಗಂಟೆಗಳ ಕಾಲ ಕೆಲಸ (70-Hour Work Week) ಮಾಡಲು ಸಿದ್ಧರಾಗಿರಬೇಕು ಎಂದು ಎನ್.ಆರ್.ನಾರಾಯಣ ಮೂರ್ತಿ ಸಲಹೆ ನೀಡಿದ್ದರು.

 

ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದಿದ್ದರು.

ಎರಡನೇ ಮಹಾಯುದ್ಧದ ಬಳಿಕ ಜರ್ಮನಿ (Germany) ಹಾಗೂ ಜಪಾನ್ (Japan) ದೇಶ ಅಭಿವೃದ್ಧಿಯಾಗಿದ್ದನ್ನು ಉಲ್ಲೇಖಿಸಿದ ಅವರು, ಎರಡನೇ ಮಹಾಯುದ್ಧದ ಬಳಿಕ ಪ್ರತಿಯೊಬ್ಬ ಜರ್ಮನ್‌ ಪ್ರಜೆ ಕೆಲ ವರ್ಷಗಳವರೆಗೆ ಹೆಚ್ಚುವರಿ ಅವಧಿ ದುಡಿಯುತ್ತಿದ್ದರು. ನಮ್ಮ ಜನಸಂಖ್ಯೆಯಲ್ಲಿ ಬಹುಪಾಲು ಯುವಜನರೇ ಇರುವುದರಿಂದ ನಮ್ಮ ದೇಶವನ್ನು ಕಟ್ಟಲು ಅವರು ರೂಪಾಂತರವಾಗುವುದು ಬಹಳ ಮುಖ್ಯ ಎಂದು ತಿಳಿಸಿದ್ದರು.

Web Stories

Share This Article