ಬಜರಂಗ ಬಲಿ ಗದೆಯೇ ತಾಲಿಬಾನ್‍ಗಳಿಗೆ ಪರಿಹಾರ: ಯೋಗಿ ಆದಿತ್ಯನಾಥ್

Public TV
2 Min Read
YOGI ADITYANATH

ಜೈಪುರ: ಇಸ್ರೇಲ್- ಹಮಾಸ್ ಯುದ್ಧ (Israel, Hamas War) ಹಾಗೂ ರಾಜಸ್ಥಾನದಲ್ಲಿ ನಡೆಯುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ (BJP- Congress) ನಡುವೆ ನಡೆಯುತ್ತಿರುವ ಫೈಟ್ ಕುರಿತು ಹೇಳಿಕೆಯೊಂದನ್ನು ನೀಡಿದ್ದಾರೆ.

ರಾಜಸ್ಥಾನದ (Rajasthan) ಅಲ್ವಾರ್ ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಾಜಾದಲ್ಲಿ ತಾಲಿಬಾನ್ (Taliban) ಮನಸ್ಥಿತಿಯನ್ನು ಹೇಗೆ ಹತ್ತಿಕ್ಕಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಾ? ಗುರಿಯನ್ನು ಹೊಡೆದು ಅದನ್ನು ನಿಖರವಾಗಿ ಪುಡಿಮಾಡುತ್ತಿದ್ದಾರೆ ಎಂದು ಹೇಳಿದರು. ಅಲ್ಲದೆ ಇದೇ ವೇಳೆ ತಾಲಿಬಾನಿಗಳಿಗೆ ಬಜರಂಗ ಬಲಿಯ ಗದೆಯೇ ಪರಿಹಾರ ಎಂದು ತಿಳಿಸಿದರು.

ರಾಜಸ್ಥಾನ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಅರಾಜಕತೆ, ಗೂಂಡಾಗಿರಿ ಮತ್ತು ಭಯೋತ್ಪಾದನೆ ಸಮಾಜಕ್ಕೆ ಶಾಪವಾಗಿದೆ. ರಾಜಕೀಯವು ಅವರಲ್ಲಿ ಸಿಕ್ಕಿಹಾಕಿಕೊಂಡಾಗ ಅದು ಸುಸಂಸ್ಕೃತ ಸಮಾಜದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಪಟೇಲ್ ಅವರು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸಿದರು. ಆದರೆ ಕಾಂಗ್ರೆಸ್ ನಾಯಕ ಜವಾಹರಲಾಲ್ ನೆಹರು (Jawaharlal Nehru) ಅವರು ಇಲ್ಲಿಯೂ ಸಮಸ್ಯೆಗಳನ್ನು ಸೃಷ್ಟಿಸಿದರು. ಇದರಿಂದಾಗಿ ಭಯೋತ್ಪಾದನೆ ಹರಡಿತು. ಬಳಿಕ ಬಿಜೆಪಿ ಸರ್ಕಾರ ಬಂದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ (Amitshah) ಕಾಶ್ಮೀರವನ್ನು ಸಮಸ್ಯೆಯಿಂದ ಮುಕ್ತಗೊಳಿಸಿದರು. ಅಲ್ಲಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ಯೋಗಿ ನುಡಿದರು. ಇದನ್ನೂ ಓದಿ: ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆ

ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಸಂಬಂಧ ಕೂಡ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಮುಂದೆಯೂ ಕಾಂಗ್ರೆಸ್ ಪಕ್ಷ ಆದಿಕಾರಕ್ಕೆ ಬಂದ್ರೆ ಅವರ ತಾಲಿಬಾನ್ ಮನಸ್ಥಿತಿಯಿಂದಾಗಿ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗುತ್ತಾರೆ ಎಂಬುದನ್ನು ನೆನಪಿಟ್ಟುಕೊಳ್ಳಿ ಎಂದು ಎಚ್ಚರಿಕೆ ನೀಡಿದರು.

ಇದಕ್ಕೂ ಮುನ್ನ ಚಿತ್ತೋರ್ ಗಢದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ (Narendra Modi), ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಮುಂದಿನ ದಿನಗಳಲ್ಲಿ ರಾಜಸ್ಥಾನದ ಪ್ರತಿಯೊಬ್ಬ ಮಹಿಳೆ ಮತ್ತು ಹೆಣ್ಣು ಮಗಳ ಸುರಕ್ಷತೆಗೆ ಶ್ರಮಿಸುತ್ತದೆ ಎಂದು ಹೇಳಿದ್ದರು.

Web Stories

Share This Article