9 ಉಗ್ರರ ಹತ್ಯೆ – ಎಲ್ಲರನ್ನೂ ನರಕಕ್ಕೆ ಕಳುಹಿಸಿದ್ದೇವೆ ಎಂದ ಪಾಕ್‌ ಸೇನೆ

Public TV
1 Min Read
pakistan army

ಇಸ್ಲಾಮಾಬಾದ್: ಪಂಜಾಬ್‌ ಪ್ರಾಂತ್ಯದ ಪಾಕಿಸ್ತಾನದ ವಾಯುಪಡೆ ತರಬೇತಿ (Pakistan Air Force Base) ನೆಲೆಯ ಮೇಲೆ ದಾಳಿ ನಡೆಸಿದ್ದ 9 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.

ಇಂದು (ಶನಿವಾರ) ಮುಂಜಾನೆ ಒಂಬತ್ತು ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ನಡೆಸಿದ್ದರು. ಅವರೆಲ್ಲರನ್ನೂ ನರಕಕ್ಕೆ ಕಳುಹಿಸಲಾಗಿದೆ ಎಂದು ಪಾಕ್‌ ಸೇನೆ ಹೇಳಿದೆ. ದೇಶದಲ್ಲಿ ಮೂರು ಪ್ರತ್ಯೇಕ ಭಯೋತ್ಪಾದಕ ದಾಳಿಗಳಲ್ಲಿ 17 ಸೈನಿಕರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಸೋವಿಯತ್‌ ಒಕ್ಕೂಟದಂತೆ ಅಮೆರಿಕವೂ ನಾಶವಾಗುತ್ತದೆ – ಹಮಾಸ್‌ ಎಚ್ಚರಿಕೆ

terrorist

ಪಾಕಿಸ್ತಾನದ ವಾಯುಪಡೆಯ ಮಿಯಾನ್‌ವಾಲಿ ತರಬೇತಿ ವಾಯುನೆಲೆಯ ಮೇಲೆ ಒಂಬತ್ತು ಭಯೋತ್ಪಾದಕರು ದಾಳಿ ನಡೆಸಿದ್ದರು. ದಾಳಿಯ ಸಮಯದಲ್ಲಿ ಕಾರ್ಯನಿರ್ವಹಿಸದ ಮೂರು ವಿಮಾನಗಳಿಗೆ ಹಾನಿಯಾಗಿತ್ತು.

ಪಿಎಎಫ್ ತರಬೇತಿ ಏರ್‌ಬೇಸ್ ಮಿಯಾನ್‌ವಾಲಿಯಲ್ಲಿ ಕೂಂಬಿಂಗ್ ಮತ್ತು ಕ್ಲಿಯರೆನ್ಸ್ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ. ಎಲ್ಲಾ ಒಂಬತ್ತು ಭಯೋತ್ಪಾದಕರನ್ನು ನರಕಕ್ಕೆ ಕಳುಹಿಸಲಾಗಿದೆ ಎಂದು ಮಿಲಿಟರಿ ದೃಢಪಡಿಸಿದೆ. ಇದನ್ನೂ ಓದಿ: ಪಾಕ್‌ ವಾಯುನೆಲೆ ಮೇಲೆ ಆತ್ಮಹತ್ಯಾ ಬಾಂಬರ್‌ಗಳ ದಾಳಿ – ಮೂವರು ಉಗ್ರರ ಹತ್ಯೆ

ತೆಹ್ರೀಕ್-ಇ-ಜಿಹಾದ್ ಪಾಕಿಸ್ತಾನ್ (ಟಿಜೆಪಿ). ಇದು ಹೊಸದಾಗಿ ರೂಪುಗೊಂಡಿರುವ ಭಯೋತ್ಪಾದಕ ಗುಂಪು. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನದ (ಟಿಟಿಪಿ) ಅಂಗಸಂಸ್ಥೆಯಾಗಿದ್ದು, ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ.

ದಾಳಿಯನ್ನು ಖಂಡಿಸಿದ ಹಂಗಾಮಿ ಪ್ರಧಾನಿ ಅನ್ವಾರುಲ್ ಹಕ್ ಕಾಕರ್, ನಮ್ಮ ಭದ್ರತಾ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಕ್ಕೆ ಅಚಲ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Share This Article