ತಿರುವನಂತಪುರ: ಕೊಚ್ಚಿಯ ನೌಕಾ ವಾಯು ನಿಲ್ದಾಣದ ಐಎನ್‌ಎಸ್ ಗರುಡಾ (INS Garuda) ರನ್‌ವೇಯಲ್ಲಿ ಚೇತಕ್ ಹೆಲಿಕಾಪ್ಟರ್‌ವೊಂದು (Chetak Helicopter) ಪತನಗೊಂಡಿದ್ದು, ಘಟನೆಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.
ನೌಕಾ ವಾಯು ನಿಲ್ದಾಣದಲ್ಲಿ (Naval Air Station) ನಿರ್ವಹಣಾ ಟ್ಯಾಕ್ಸಿ ತಪಾಸಣೆ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ವಕ್ತಾರರು ಎಕ್ಸ್‌ನಲ್ಲಿ (X) ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮುಕೇಶ್ ಅಂಬಾನಿಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್
ಇಂದು ಕೊಚ್ಚಿಯ ಐಎನ್‌ಎಸ್ ಗರುಡಾದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆಯ ವೇಳೆ ಚೇತಕ್ ಹೆಲಿಕಾಪ್ಟರ್ ಅಪಘಾತಕ್ಕೀಡಾಯಿತು. ಇದರ ಪರಿಣಾಮವಾಗಿ ಸಿಬ್ಬಂದಿಯೊಬ್ಬರು ದುರಾದೃಷ್ಟಕರವಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನೌಕಾಪಡೆ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಒಂದೇ ತಿಂಗಳಲ್ಲಿ ಮೂರು ಬಾರಿ ಕಂಪನ- ದೆಹಲಿಯಲ್ಲಿ ನಿರಂತರ ಭೂಕಂಪನಕ್ಕೆ ಕಾರಣವೇನು?
ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ. ನೌಕಾಪಡೆಯ ವಕ್ತಾರರು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಎಲ್ಲಾ ನೌಕಾಪಡೆಯ ಸಿಬ್ಬಂದಿ, ಯೋಗೇಂದ್ರ ಸಿಂಗ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ವಿಷವಾಗುತ್ತಿದೆಯಾ ಉಸಿರಾಡುವ ಗಾಳಿ? – ಪರಿಶೀಲನೆಗೆ 1,119 ಅಧಿಕಾರಿಗಳ 517 ತಂಡ ರಚನೆ
ಅಡ್ಮಿರಲ್ ಹರಿ ಕುಮಾರ್ ಮತ್ತು ಭಾರತೀಯ ನೌಕಾಪಡೆಯ ಎಲ್ಲಾ ಸಿಬ್ಬಂದಿ ಘಟನೆಯಲ್ಲಿ ಮೃತಪಟ್ಟ ಸಿಬ್ಬಂದಿಗೆ ಸಂತಾಪ ಸೂಚಿಸಿದ್ದಾರೆ. ಕೊಚ್ಚಿಯಲ್ಲಿ ನಡೆದ ದುರದೃಷ್ಟಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಸಿಬ್ಬಂದಿ ಯೋಗೇಂದ್ರ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ದುಃಖಿತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: Nepal Earthquake: ಭೀಕರ ಭೂಕಂಪನಕ್ಕೆ ಬೆಚ್ಚಿಬಿದ್ದ ನೇಪಾಳ- 70 ಮಂದಿ ದುರ್ಮರಣ