ಬೆಳ್ಳಂಬೆಳಗ್ಗೆ ಭೀಕರ ಬಸ್‌ ಅಪಘಾತ – ನಾಲ್ವರು ಸಾವು, 28 ಮಂದಿಗೆ ಗಾಯ

Public TV
1 Min Read
Bus

ಜೈಪುರ: ನಿಯಂತ್ರಣ ತಪ್ಪಿದ ಬಸ್‌ವೊಂದು ರೈಲು ಹಳಿಯ (Railway Track) ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಸೋಮವಾರ (ಇಂದು) ಬೆಳ್ಳಂಬೆಳಗ್ಗೆ ರಾಜಸ್ಥಾನದ ದೌಸಾ (Rajasthan Dausa) ಜಿಲ್ಲೆಯಲ್ಲಿ ನಡೆದಿದೆ.

ಮಧ್ಯರಾತ್ರಿ 2:15ಕ್ಕೆ ಮೇಲ್ಸೇತುವೆಯಿಂದ ದೌಸಾದ ರೈಲ್ವೆ ಹಳಿ ಮೇಲೆ ಬಸ್‌ ಬಿದ್ದು, ದುರಂತ ಸಂಭವಿಸಿದೆ. 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹರಿದ್ವಾರದಿಂದ (Haridwar) ಉದಯಪುರಕ್ಕೆ ತೆರಳುತ್ತಿತ್ತು. ಇದನ್ನೂ  ಓದಿ: ಹಿಂದೂ ಅಂತ ಹೇಳಿಕೊಂಡು ಸಾಲ ಪಡೆದ – ವಾಪಾಸ್ ಕೇಳಿದ್ದಕ್ಕೆ ಮಹಿಳೆ ತೇಜೋವಧೆ ಮಾಡಿ ಪೊಲೀಸರ ಅತಿಥಿಯಾದ

Accident 1

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹೆಚ್ಚುವರಿ ತನಿಖೆ ನಡೆಸಲಾಗುತ್ತಿದೆ ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್‌ಕುಮಾರ್ ಕಸ್ವಾ ತಿಳಿಸಿದ್ದಾರೆ. ಇದನ್ನೂ  ಓದಿ: ಅಕ್ರಮ ಗಣಿಗಾರಿಕೆ ತಡೆದಿದ್ದೇ ಪ್ರತಿಮಾ ಕೊಲೆಗೆ ಕಾರಣವಾಯ್ತಾ? – ಹಲವು ಆಯಾಮಗಳಲ್ಲಿ ಪೊಲೀಸ್‌ ತನಿಖೆ

ಸಂಬಂಧಪಟ್ಟ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ  ಓದಿ: ಸರ್ಕಾರದ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇ ತಪ್ಪಾ?: ಕೊಲೆಯಾದ ಪ್ರತಿಮಾ ಸಹೋದರನ ಗೋಳಾಟ

Share This Article