ಪ್ರತಿಮಾ ಕೊಲೆ ಪ್ರಕರಣ- ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ

Public TV
1 Min Read
Deputy Director prathima stabbed to death in bengaluru 1

ಬೆಂಗಳೂರು: ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ (Prathima Murder Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಅವರ ಚಾಲಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕಾಂಟ್ರಾಕ್ಟ್ ಬೇಸಿಸ್ ನಲ್ಲಿ ಕಿರಣ್ ಕೆಲಸ ಮಾಡುತ್ತಿದ್ದ. ಕಳೆದ ಐದು ವರ್ಷಗಳಿಂದ ಕೆಲಸ ಮಾಡ್ತಿದ್ದ ಕಿರಣ್‍ಗೆ ಕೆಲವೊಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಮಾ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಕಿರಣ್ ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭೂ ವಿಜ್ಞಾನಿ ಪ್ರತಿಮಾ ಕಗ್ಗೊಲೆ- ಹಂತಕರ ಪತ್ತೆಗೆ 6 ಸ್ಪೆಷಲ್ ತಂಡ ರಚನೆ

ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾದ್ದರು. ಸದ್ಯ ಕೃತ್ಯ ನಡೆದ ಬಳಿಕ ಕಿರಣ್ ಚಾಮರಾಜನಗರ ಕಡೆಗೆ ಎಸ್ಕೇಪ್ ಆಗಿದ್ದ. ಈ ವೇಳೆ ಚಾಮರಾಜನಗರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತ ಪ್ರತಿಮಾ ಮೊಬೈಲ್ ವಶಕ್ಕೆ ಪಡೆದಿರುವ ಸುಬ್ರಹ್ಮಣ್ಯಪುರ ಪೊಲೀಸರು ಪರಿಶೀಲನೆಗೆ ನಡೆಸುತ್ತಿದ್ದಾರೆ. ಕೊಲೆಯಾದ ವೇಳೆ ಮನೆಯ ಬಾಗಿಲು ಬಳಿ ಪ್ರತಿಮಾ ಮೊಬೈಲ್ ಫೋನ್ ಪತ್ತೆಯಾಗಿತ್ತು. ಆದರೆ ಫೋನ್ ಲಾಕ್ ಹಿನ್ನೆಲೆಯಲ್ಲಿ ಟೆಕ್ನಿಕಲ್ ಸೆಲ್ ಗೆ ರವಾನಿಸಿ ಲಾಕ್ ತೆಗೆದು ಪರಿಶೀಲಿಸುತ್ತಿದ್ದಾರೆ. ಒಂದು ವಾರದಿಂದ ಎಷ್ಟು ಕರೆಗಳು ಬಂದಿದ್ದವು?. ಯಾರ್ಯಾರು ಕರೆ ಮಾಡಿದ್ದಾರೆ..?. ಪ್ರತಿಮಾ ಅವರೇ ಯಾರಿಗಾದರೂ ಕರೆ ಮಾಡಿ ಮಾತನಾಡಿದ್ದಾರಾ ಅಂತಾ ಪರಿಶೀಲಿಸುತ್ತಿದ್ದಾರೆ.

ಪ್ರತಿಮಾ ಮನೆ ಇರುವ ರಸ್ತೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಿವೆ. ಆದರೆ ಕೇವಲ 3 ಸಿಸಿಟಿವಿ ಮಾತ್ರವೇ ಅಳವಡಿಕೆ ಮಾಡಲಾಗಿತ್ತು. ಸದ್ಯ ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ.

Share This Article