ಸನಾತನ ಧರ್ಮವನ್ನು ಕೊನೆವರೆಗೂ ವಿರೋಧಿಸುತ್ತೇನೆ: ಉದಯನಿಧಿ ಸ್ಟಾಲಿನ್‌

Public TV
2 Min Read
udhayanidhi stalin 1

ಚೆನ್ನೈ: ತಮಿಳುನಾಡು ಸಚಿವ ಮತ್ತು ಡಿಎಂಕೆ (DMK) ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಸೋಮವಾರ ‘ಸನಾತನ ಧರ್ಮ’ ಕುರಿತು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಕೊನೆವರೆಗೂ ಸನಾತನ ಧರ್ಮ ವಿರೋಧಿಸುತ್ತೇನೆ ಎಂದು ಉದಯನಿಧಿ ಹೇಳಿಕೆ ನೀಡಿದ್ದಾರೆ.

ಸನಾತನ ಧರ್ಮವನ್ನು (Sanatana Dharma) ‘ಡೆಂಗ್ಯೂ’ ಮತ್ತು ‘ಮಲೇರಿಯಾ’ಗೆ ಹೋಲಿಸಿದ್ದ ಉದಯನಿಧಿ ಸ್ಟಾಲಿನ್, ತಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಪರಿಣಾಮ ಎದುರಿಸಲು ಸಿದ್ಧ ಎಂದು ಹೇಳಿದ್ದರು. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

Udhayanidhi Stalin

ಸನಾತನ ಧರ್ಮದ ಕುರಿತು ಮತ್ತೆ ಮಾತನಾಡಿರುವ ಸಿಎಂ ಸ್ಟಾಲಿನ್‌ ಪುತ್ರ, ನಾನೇನೂ ತಪ್ಪಾಗಿ ಹೇಳಿಲ್ಲ. ನಾನು ಹೇಳಿದ್ದು ಸರಿ, ಅದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. ನನ್ನ ಹೇಳಿಕೆಯನ್ನು ಬದಲಾಯಿಸುವುದಿಲ್ಲ. ನನ್ನ ಸಿದ್ಧಾಂತವನ್ನು ಮಾತನಾಡಿದ್ದೇನೆ. ಅಂಬೇಡ್ಕರ್, ಪೆರಿಯಾರ್ ಹೇಳಿದ್ದಕ್ಕಿಂತ ಹೆಚ್ಚಾಗಿ ಮಾತನಾಡಿಲ್ಲ. ನಾನು ಎಂಎಲ್ಎ ಆಗಬಹುದು, ಮಂತ್ರಿಯಾಗಬಹುದು ಅಥವಾ ಯುವ ಘಟಕದ ಕಾರ್ಯದರ್ಶಿಯಾಗಿ ನಾಳೆ ನಾನು ಇರಬಹುದು. ಆದರೆ ಮನುಷ್ಯನಾಗಿರುವುದು ಹೆಚ್ಚು ಮುಖ್ಯ ಎಂದು ತಿಳಿಸಿದ್ದಾರೆ.

ನಾವು ಹಲವಾರು ವರ್ಷಗಳಿಂದ ಸನಾತನದ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ ನೀಟ್ ಆರು ವರ್ಷಗಳ ಹಿಂದಿನ ಸಮಸ್ಯೆಯಾಗಿದೆ. ಇದು (ಸನಾತನ) ನೂರಾರು ವರ್ಷಗಳ ಸಮಸ್ಯೆಯಾಗಿದೆ. ನಾವು ಇದನ್ನು ಕೊನೆವರೆಗೂ ವಿರೋಧಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

m.k.stalin KRS

ಸೆಪ್ಟೆಂಬರ್‌ನಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌, ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು. ನಾವು ಸನಾತನವನ್ನು ಹೀಗೆಯೇ ನಿರ್ಮೂಲನೆ ಮಾಡಬೇಕು” ಎಂದು ಹೇಳಿದ್ದರು.

ಅವರ ಹೇಳಿಕೆಯು ಆಡಳಿತಾರೂಢ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಸ್ಟಾಲಿನ್ ಅವರ ಹೇಳಿಕೆಯು ಯಹೂದಿಗಳ ಬಗ್ಗೆ ಹಿಟ್ಲರ್ ಹೊಂದಿದ್ದ ನಿಲುವಿಗೆ ಹೋಲುತ್ತದೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಸನಾತನ ಧರ್ಮದ ವಿರುದ್ಧ ಹೇಳಿಕೆ ನಿಲ್ಲಿಸಿ, ಬಿಜೆಪಿ ಭ್ರಷ್ಟಚಾರದ ಬಗ್ಗೆ ಮಾತನಾಡಿ: ಕಾರ್ಯಕರ್ತರಿಗೆ ಸ್ಟಾಲಿನ್ ಸಲಹೆ

Share This Article