ಜೆಡಿಎಸ್‌ನಲ್ಲಿ ಮುಂದುವರಿದ ಶಾಸಕ ಶರಣಗೌಡ ಕಂದಕೂರು ಅಸಮಾಧಾನ – ಸಭೆಗೆ ಹಾಜರಾಗದೇ ವರಿಷ್ಠರಿಗೆ ಸೆಡ್ಡು

Public TV
1 Min Read
Sharan Gowda Kandakur

ಯಾದಗಿರಿ: ಇಂದು (ಬುಧವಾರ) ಹಾಸನದಲ್ಲಿ (Hassan) ಜೆಡಿಎಸ್ (JDS) ಶಾಸಕರ ಮಹತ್ವದ ಸಭೆ ನಡೆಯುತ್ತಿದ್ದರೂ ಸಭೆಗೆ ಯಾದಗಿರಿಯ (Yadgiri) ಗುರುಮಟ್ಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು (Sharana Gowda Kandakur) ಗೈರಾಗುವ ಮೂಲಕ ತಮ್ಮ ಹೈಕಮಾಂಡ್‌ಗೆ ಶಾಕ್ ನೀಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿನ ಮೈತ್ರಿ ಕುರಿತು ಮಹತ್ವ ಪಡೆದುಕೊಂಡಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧಿಸಿದ್ದ ಶಾಸಕ ಶರಣಗೌಡ ಕಂದಕೂರು ಮೊದಲಿನಿಂದಲೂ ಪಕ್ಷದ ಜೊತೆ ಅಂತರ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀಗೆ ಜೈಲಾ? ಬೇಲಾ? ಇಂದು ಹೈಕೋರ್ಟ್ ನಿರ್ಧಾರ

ಜೆಡಿಎಸ್ ಪಕ್ಷದೊಂದಿಗೆ ಅಂತರ ಕಾಯ್ದಕೊಳ್ಳುತ್ತಿರುವ ಶಾಸಕ ಶರಣಗೌಡ ಕಂದಕೂರು ಪದೇ ಪದೇ ಜೆಡಿಎಸ್ ಸಭೆಗೆ ಗೈರಾಗುತ್ತಿದ್ದಾರೆ. ಈಗಾಗಲೇ 3-4 ಬಾರಿ ಜೆಡಿಎಸ್ ಸಭೆಗೆ ಗೈರಾಗಿರುವ ಶಾಸಕ ಶರಣಗೌಡ ಕಂದಕೂರು, ಬೆಂಗಳೂರಿನಲ್ಲಿದ್ದರೂ ಇಂದಿನ ಹಾಸನದ ಶಾಸಕರ ಸಭೆಗೆ ಹಾಜರಾಗಿಲ್ಲ. ಕಳೆದ ಶನಿವಾರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ನಡೆಸಿದ್ದ ಸಭೆಗೂ ಶಾಸಕ ಶರಣಗೌಡ ಕಂದಕೂರು ಗೈರಾಗಿದ್ದರು. ಇದನ್ನೂ ಓದಿ: ನಾನು ಭ್ರಷ್ಟನಲ್ಲ, ಲಂಚ ಸ್ವೀಕರಿಸುವುದಿಲ್ಲ; ವೈರಲ್‌ ಆಯ್ತು ಸರ್ಕಾರಿ ಅಧಿಕಾರಿಯ ಟೇಬಲ್‌ ಬೋರ್ಡ್‌

Share This Article