Cash for Query – ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ

Public TV
1 Min Read
MahuaMoitra

ನವದೆಹಲಿ: ಪ್ರಶ್ನೆಗಾಗಿ ಕಾಸು (Cash for Query) ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (TMC MP Mahua Moitra) ಅವರ ವಿರುದ್ಧ ಸಿಬಿಐ (CBI) ತನಿಖೆ ನಡೆಯುವ ಸಾಧ್ಯತೆಯಿದೆ.

ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಪಾಲ್(Lokpal) ಕೇಂದ್ರ ತನಿಖಾ ದಳಕ್ಕೆ (CBI) ಸೂಚಿಸಿರುವ ಮಾಹಿತಿಯನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ (BJP MP Nishikant Dubey) ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.
ಇದನ್ನೂ ಓದಿ: ಹೊರ ರಾಜ್ಯದ ನೋಂದಣಿಯ ಕ್ಯಾಬ್‌ಗಳಿಗಿಲ್ಲ ದೆಹಲಿ ಪ್ರವೇಶ

ಈ ಸಂಬಂಧ ಪೋಸ್ಟ್‌ ಮಾಡಿರುವ ನಿಶಿಕಾಂತ್ ದುಬೆ, ನಾನು ನೀಡಿದ ದೂರಿನ ಆಧಾರದ ಹಿನ್ನೆಲೆಯಲ್ಲಿ ಲೋಕಪಾಲ್ ಸಂಸ್ಥೆಯು, ರಾಷ್ಟ್ರೀಯ ಭದ್ರತೆಗೆ ಸವಾಲೊಡ್ಡಿದ ಮಹುವಾ ಮಯಿತ್ರಾ ಅವರ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಕೈಗೊಳ್ಳುವಂತೆ ಸಿಬಿಐಗೆ ಸೂಚಿಸಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ವಿರುದ್ಧ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದರು. ಈ ಆರೋಪಕ್ಕೆ ಪೂರಕ ಎಂಬಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೀತಿ ಸಮಿತಿಗೆ ಅಫಿಡವಿಟ್‌ ಸಲ್ಲಿಸಿ ಮಹುವಾ ಮೊಯಿತ್ರಾ ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ತಿಳಿಸಿದ್ದರು.

 

Share This Article