ಮಹುವಾ ಮೊಯಿತ್ರಾ ಲೋಕಸಭಾ ಸದಸ್ಯತ್ವ ರದ್ದು – ನೈತಿಕ ಸಮಿತಿ ವರದಿಯಲ್ಲಿ ಏನಿದೆ?

Public TV
2 Min Read
Mahua Moitra

ನವದೆಹಲಿ: ಪ್ರಶ್ನೆಗಾಗಿ ಲಂಚ ಪ್ರಕರಣದಲ್ಲಿ (Cash for Query Case) ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ (TMC MP Mahua Moitra) ಸಂಕಷ್ಟ ಎದುರಾಗಿದೆ. ಅವರ ಲೋಕಸಭೆ (Lok Sabha) ಸದಸ್ಯತ್ವ ರದ್ದಾಗುವ ಸಾಧ್ಯತೆಯಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಸಭೆಯ ನೈತಿಕ ಸಮಿತಿ, ಮಹುವಾ ಲೋಕಸಭೆ ಸದಸ್ಯತ್ವ ರದ್ದು ಮಾಡುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎಂದು ವರದಿಗಳು ತಿಳಿಸಿವೆ.

Darshan Hiranandani Mahua Moitra

ಮೊಯಿತ್ರಾ ನಡೆ ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ, ದೋಷಪೂರಿತ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ. ನೈತಿಕ ಸಮಿತಿಯ ಒಟ್ಟು 10 ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು ಅದನ್ನು ವಿರೋಧಿಸಿದ್ದಾರೆ.

ಮುಂದಿನ ಕ್ರಮಕ್ಕಾಗಿ ವರದಿಯನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಸಭೆಯ ನಂತರ ನಾಲ್ವರು ವಿರೋಧ ಪಕ್ಷದ ಸದಸ್ಯರು ಸಮಿತಿಯ ಶಿಫಾರಸು ‘ಪೂರ್ವಾಗ್ರಹ ಪೀಡಿತ’ ಮತ್ತು ‘ತಪ್ಪು’ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ

ಮಹುವಾ ಮೊಯಿತ್ರಾ ಅವರು ಅನಧಿಕೃತ ವ್ಯಕ್ತಿಗಳೊಂದಿಗೆ ಯೂಸರ್ ಐಡಿಯನ್ನು ಹಂಚಿಕೊಂಡಿದ್ದಾರೆ. ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಸ್ವೀಕರಿಸಿದ್ದು ಗಂಭೀರವಾದ ದುಷ್ಕೃತ್ಯ ಎಂದು ಸಮಿತಿ ತೀರ್ಮಾನಿಸಿದೆ. ಮೊಯಿತ್ರಾ ಮತ್ತು ದರ್ಶನ್ ಹಿರಾನಂದನಿ ಮಧ್ಯೆ ನಡೆದ ನಗು ವಹಿವಾಟಿನ ಬಗ್ಗೆ ಭಾರತ ಸರ್ಕಾರ ತನಿಖೆ ನಡೆಸಬೇಕು  ಶಿಫಾರಸು ಮಾಡಿದೆ ಎನ್ನಲಾಗಿದೆ.

 

ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ವಿರುದ್ಧ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದರು. ಈ ಆರೋಪಕ್ಕೆ ಪೂರಕ ಎಂಬಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೀತಿ ಸಮಿತಿಗೆ ಅಫಿಡವಿಟ್‌ ಸಲ್ಲಿಸಿ ಮಹುವಾ ಮೊಯಿತ್ರಾ ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ತಿಳಿಸಿದ್ದರು.

Share This Article