ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ (Varthur Santhosh) ನಂತರ ತನಿಷಾಗೆ (Tanisha Kuppanda) ಸಂಕಷ್ಟವೊಂದು ಎದುರಾಗಿದೆ. ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣರ ಮತ್ತೊಂದು ಡೀಪ್‌ಫೇಕ್ ವಿಡಿಯೋ ವೈರಲ್
ನಟಿ ತನಿಷಾ ಕುಪ್ಪಂಡ ವಿರುದ್ಧ ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರಿಂದ ನವೆಂಬರ್ 11ರಂದು ದೂರು ದಾಖಲಾಗಿದ್ದು, ನವೆಂಬರ್ 12 ದೂರಿನ ಆಧಾರದ ಮೇಲೆ ಕುಂಬಳಗೂಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅವಹೇಳನಕಾರಿ ಪದ ಬಳಕೆ ಬಗ್ಗೆ ತನಿಷಾ ವಿರುದ್ಧ ಆರೋಪ ಎದುರಾಗಿದೆ.
ಡ್ರೋನ್ ಪ್ರತಾಪ್‌ಗೆ ಮಾತನಾಡುವ ಭರದಲ್ಲಿ ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಿ ಎಸ್‌ಸಿಎಸ್ಟಿ ಕಾಯ್ದೆಯಡಿ ದೂರು ದಾಖಲಾಗಿದೆ. ವರ್ತೂರು ಸಂತೋಷ್ ನಂತರ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜೈಲು ಸೇರುತ್ತಾರಾ? ಕಾಯಬೇಕಿದೆ.