Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ

Bengaluru City

ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ

Public TV
Last updated: November 16, 2023 10:47 am
Public TV
Share
3 Min Read
Yathindra Siddaramaiah HD Kumaraswamy
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಗ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಂದೆ ಜೊತೆ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಬರೆದಿರುವ ಹೆಚ್‌ಡಿ ಕುಮಾರಸ್ವಾಮಿ, ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೋ ತುಣುಕೇ ಸಾಕ್ಷಿ ಎಂದು ಕೆಂಡ ಕಾರಿದ್ದಾರೆ.

Yathindra Siddaramaiah

ಹೆಚ್‌ಡಿಕೆ ಟ್ವೀಟ್‌ನಲ್ಲೇನಿದೆ?
ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ.

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು?

ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ… pic.twitter.com/T1366ek2iS

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 16, 2023

ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, ‘ನಾನು ಹೇಳಿದವರಷ್ಟನ್ನೇ ಮಾಡಿ’ ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ‘ಒಳ ವಸೂಲಿ ಸಚಿವಾಲಯ’ದ ಸಚಿವರಾ?

ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತಿ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಆಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ? ಇದನ್ನೂ ಓದಿ: ಹಲೋ ಅಪ್ಪ, ನಾನು ಕೊಟ್ಟಿರೋದು ನಾಲ್ಕೋ ಐದೋ ಅಷ್ಟು ಮಾತ್ರ ಮಾಡಿ – ಯತೀಂದ್ರ ಮಾತಿನ ಮರ್ಮ ಏನು?

ಈಗ ಹೇಳಿ ಸಿದ್ದರಾಮಯ್ಯನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್‌ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸೆಂಟೇಜ್ ಪಟಾಲಂಗೆ ಎಷ್ಟು?

ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವೀಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ ‘ಸುಲಿಗೆಪುತ್ರ’ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು.

ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ? ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ. ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ. ಇದು ನನ್ನ ಆಗ್ರಹ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

TAGGED:cmcongresshd kumaraswamysiddaramaiahYathindra siddaramaiahಕಾಂಗ್ರೆಸ್ಯತೀಂದ್ರ ಸಿದ್ದರಾಮಯ್ಯಸಿಎಂಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
8 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
10 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?