ತುಮಕೂರಿನಲ್ಲೊಂದು ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ

Public TV
1 Min Read
Tumakuru Cricket Lovers Marriage

ತುಮಕೂರು: ಬುಧವಾರ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವೆ ಸೆಮಿ ಫೈನಲ್ (Semi Final) ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ (World Cup) ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ನಡುವೆ ತುಮಕೂರಿನಲ್ಲಿ (Tumakuru) ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ ಬಂಧುಗಳಿಗಾಗಿ ಇಂಡೋ-ಕಿವೀಸ್ ಸೆಮಿ ಫೈನಲ್ ಮ್ಯಾಚ್ ಹಾಕಿಸಿ ಸುದ್ದಿಯಾಗಿದ್ದಾರೆ.

ಪಾವಗಡದ (Pavagada) ಎಸ್‌ಎಸ್‌ಕೆ ಕಲ್ಯಾಣ ಮಂಟಪದಲ್ಲಿ ಕ್ರಿಕೆಟ್ ಪ್ರೇಮಿಗಳಾದ ಸೌಂದರ್ಯ ಹಾಗೂ ಕಾರ್ತಿಕ್ ಸೆಮಿ ಫೈನಲ್ ದಿನವೇ ತಮ್ಮ ಮದುವೆ ಮಾಡಿಕೊಂಡಿದ್ದು, ಮದುವೆ ಮಂಟಪದಲ್ಲೇ ಇಂಡಿಯಾ ಮತ್ತು ನ್ಯೂಜಿಲೆಂಡ್ ಸೆಮಿ ಫೈನಲ್ ಪಂದ್ಯ ವೀಕ್ಷಿಸಿದ್ದಾರೆ. ವಧು ಹಾಗೂ ವರ ಮದುವೆ ಮಂಟಪದಲ್ಲಿ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ ಮಾಡಿದ್ದು, ಆರತಕ್ಷತೆಗೆ ಬಂದಿದ್ದ ಸಂಬಂಧಿಕರು, ಸ್ನೇಹಿತರಿಗಾಗಿ ಎಲ್‌ಇಡಿ (LED) ಮೂಲಕ ಪಂದ್ಯವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: World Cup Semifinal: 7 ವಿಕೆಟ್‌ ಕಿತ್ತು ಗ್ಲೆನ್‌ ಮ್ಯಾಕ್‌ಗ್ರಾತ್‌ ದಾಖಲೆ ಸರಿಗಟ್ಟಿದ ಶಮಿ

ಮದುವೆಗೆಂದು ಬಂದವರಿಗೆ ಆರ್ಕೆಸ್ಟ್ರಾ ಜೊತೆ ಮ್ಯಾಚ್ ನೋಡಲು ಎಲ್‌ಇಡಿ ವ್ಯವಸ್ಥೆ ಕಲ್ಪಿಸಿದ್ದು, ಮದುವೆ ಆರತಕ್ಷತೆಯಲ್ಲಿ ಭರ್ಜರಿ ಊಟದೊಂದಿಗೆ ಪಂದ್ಯ ವೀಕ್ಷಣೆಯ ಭಾಗ್ಯ ಲಭಿಸಿದೆ. ಸೆಮಿ ಫೈನಲ್‌ನಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸುತ್ತಿದ್ದಂತೆ ಮದುವೆ ಮಂಟಪದಲ್ಲಿ ಸಂಭ್ರಮಾಚರಣೆ ಜೋರಾಗಿ ನಡೆದಿದೆ. ಇದನ್ನೂ ಓದಿ: ಸೆಮಿಸ್‌ನಲ್ಲೂ ಶಮಿ ಮಿಂಚು; ಕಿವೀಸ್‌ ವಿರುದ್ಧ 70 ರನ್‌ಗಳ ಭರ್ಜರಿ ಜಯ – 4ನೇ ಬಾರಿಗೆ ವಿಶ್ವಕಪ್‌ ಫೈನಲ್‌ಗೆ ಭಾರತ ಎಂಟ್ರಿ

Share This Article