ಹೋಟೆಲಿನಲ್ಲಿ ಸ್ಕ್ರೂಡ್ರೈವರ್‌ನಿಂದ 41 ಬಾರಿ ಇರಿದು ಪತ್ನಿಯ ಹತ್ಯೆಗೈದ ಪತಿ

Public TV
1 Min Read
Crime 1 2

ಅಂಕಾರಾ: ಬ್ರಿಟನ್ (Britain) ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ 41 ಬಾರಿ ಸ್ಕ್ರೂಡ್ರೈವರ್‍ನಿಂದ ಇರಿದು ಹತ್ಯೆಗೈದ ಘಟನೆ ಟರ್ಕಿಯ (Turkey) ಇಸ್ತಾಂಬುಲ್‍ನ ಹೋಟೆಲ್‍ನಲ್ಲಿ ನಡೆದಿದೆ.

ಆರೋಪಿಯನ್ನು ಬಂಧಿಸಲಾಗಿದ್ದು, ಅಹ್ಮತ್ ಯಾಸಿನ್ (28) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಪತ್ನಿಗೆ ಸ್ಕ್ರೂಡ್ರೈವರ್ ಇರಿದು ಹತ್ಯೆಗೈದಿರುವುದು ದೃಢವಾಗಿದೆ. ಮಹಿಳೆಯ ಕಿರುಚಾಟ ಕೇಳಿ ಹೋಟೆಲ್ ಸಿಬ್ಬಂದಿ ಕೊಠಡಿಗೆ ಪ್ರವೇಶಿಸಿದಾಗ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಇದನ್ನೂ ಓದಿ: ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ದಾರುಣ ಸಾವು

ದಂಪತಿ ಇಂಗ್ಲೆಂಡ್‍ನಿಂದ ಬಂದು ಹೊಟೆಲ್‍ನಲ್ಲಿ ತಂಗಿದ್ದರು ಎಂದು ತಿಳಿದು ಬಂದಿದೆ. ಡ್ರಗ್ಸ್ ಸೇವಿಸಿದ ಬಳಿಕ ಇಬ್ಬರ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಮಹಿಳೆಯ ಹತ್ಯೆಯ ಬಳಿಕ ಆರೋಪಿ ಸ್ಕ್ರೂಡ್ರೈವರ್‍ನ್ನು ಎಸೆದಿದ್ದು, ಸಾಕ್ಷ ನಾಶಕ್ಕೆ ಯತ್ನಿಸಿದ್ದಾನೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸೂಕ್ತ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆ – ಆರೋಪಿಗಳನ್ನು ಬಡಿದು ಕೊಂದ ಗ್ರಾಮಸ್ಥರು

Share This Article