Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Breaking: ಜೆಡಿಎಸ್‌ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು – ದೊಡ್ಡಗೌಡರ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Breaking: ಜೆಡಿಎಸ್‌ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು – ದೊಡ್ಡಗೌಡರ ಆದೇಶ

Bengaluru City

Breaking: ಜೆಡಿಎಸ್‌ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು – ದೊಡ್ಡಗೌಡರ ಆದೇಶ

Public TV
Last updated: November 17, 2023 7:14 pm
Public TV
Share
3 Min Read
CM Ibrahim
SHARE

ಬೆಂಗಳೂರು: ಸಿಎಂ ಇಬ್ರಾಹಿಂ (CM Ibrahim) ಅವರನ್ನು ಜೆಡಿಎಸ್‌ ಪಕ್ಷದಿಂದಲೇ ಅಮಾನತುಗೊಳಿಸಿರುವುದಾಗಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು (HD DeveGowda) ಆದೇಶ ಹೊರಡಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ದೊಡ್ಡಗೌಡರು ಈ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ (BJP-JDS Alliance) ವಿಚಾರದಲ್ಲಿ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ್ದರೂ ತಾನೇ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡು ಪ್ರತ್ಯೇಕ ಸಭೆ ನಡೆಸಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದಾಗಿ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಶಾಸಕಾಂಗ ಸಭೆಗೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ- ಸಭೆ ಬಹಿಷ್ಕರಿಸಿದ ಇಬ್ಬರು ಶಾಸಕರು

CamScanner 11 17 2023 15.47.57 page 0001

ಆದೇಶ ಪ್ರತಿಯಲ್ಲಿ ಏನಿದೆ..?
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ), ಹಿಂದಿನ ಮಹಾ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್‌ ಶಾಸಕರಾದ ಎಸ್.ಎಲ್. ಬೋಜೇಗೌಡ ರವರು ದಿನಾಂಕ: 19-10-2023ರ ವರದಿಯಲ್ಲಿ ಕರ್ನಾಟಕ ರಾಜ್ಯ ಪರಿಷತ್‌ನ ಪ್ರಸ್ತುತ ಕಾರ್ಯಕಾರಿ ಸಮಿತಿ, ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ. ಮುಂದುವರೆದು, ಪಕ್ಷದ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿಲ್ಲ, ರಾಜ್ಯಾಧ್ಯಕ್ಷರು ಒಳಗೊಂಡಂತೆ ರಾಜ್ಯ ಪರಿಷತ್‌ನ ಕಾರ್ಯಕಾರಿ ಸಮಿತಿ ನಿಷ್ಕ್ರಿಯವಾಗಿರುವುದಾಗಿಯೂ ಸಹ ವರದಿಯಲ್ಲಿ ತಿಳಿಸಿರುತ್ತಾರೆ.

CamScanner 11 17 2023 15.47.57 page 0002

ಮುಂದುವರಿದು ದಿನಾಂಕ 06-09-2023, 10-09-2023 02 01-10-2023 ರಂದು ನಡೆದ ಪಕ್ಷದ ಸಭೆಗಳಲ್ಲಿ ಪಕ್ಷದ ಹಿತದೃಷ್ಠಿಯಿಂದ ಮತ್ತು ಪಕ್ಷವನ್ನು ಸಂಘಟನೆ, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಪಕ್ಷದಿಂದ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕೆ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ. ಈ ಮೇಲಿನ ಸಭೆಗಳಲ್ಲಿ ಸಿ.ಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು, ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದು, ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ (ಜಾತ್ಯತೀತ) ಪಕ್ಷದ ಸಂವಿಧಾನದ ಸಮಿತಿಯ (ಜಾತ್ಯತೀತ) ಪಕ್ಷದ ಪದಾಧಿಕಾರಿಗಳನ್ನು ಜನತಾದಳ Article XX (10) ರನ್ವಯ ದಿನಾಂಕ:19-10-2023ರಂದು ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: 600 ಕೋಟಿ ರೂ. ಭ್ರಷ್ಟಾಚಾರ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

CamScanner 11 17 2023 15.47.57 page 0003

ತದನಂತರ, ನಿರ್ಗಮಿತ ರಾಜ್ಯಾಧ್ಯಕ್ಷ ಇಬ್ರಾಹಿಂ ಅವರು ಅಕ್ಟೋಬರ್‌ 16 ರಂದು ಬೆಂಗಳೂರಿನಲ್ಲಿ ಚಿಂತನ-ಮಂಥನ ಎನ್ನುವ ಹೆಸರಿನ ಪಕ್ಷದ ಸಮಾನಂತರ ಸಭೆಯನ್ನು ಕರೆದು, ಜೆಡಿಎಸ್-ಬಿಜೆಪಿ ಹೊಂದಾಣಿಕೆ ಬಗ್ಗೆ ಸಭೆಯಲ್ಲಿ ವಿರೋಧ ವ್ಯಕ್ತಪಡಿಸುತ್ತಾ ಪಕ್ಷದ ರಾಷ್ಟ್ರಧ್ಯಕ್ಷರು ಮತ್ತು ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆ ಮತ್ತು ಸುಳ್ಳು ಆರೋಪಗಳನ್ನು ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ಮಾಡಿರುವುದಾಗಿ ವರದಿಯಾಗಿದೆ. ಮುಂದುವರೆದು, ದಿನಾಂಕ: 07-11-2023ರಂದು ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಪಕ್ಷದ ರಾಜ್ಯ ಮಟ್ಟದ ವಿಭಾಗ ಮುಖ್ಯಸ್ಥರನ್ನು ಉದ್ದೇಶಿಸಿ ಇಬ್ರಾಹಿಂ ಅವರು ಬರೆದಿರುವ ಪತ್ರದಲ್ಲಿ ಅಕ್ಟೋಬರ್‌ 19 ರಂದು ರಾಜ್ಯ ಕಾರ್ಯಕಾರಿ ಸಮಿತಿಯ ರಾಜ್ಯಾಧ್ಯಕ್ಷರನ್ನು ಒಳಗೊಂಡಂತೆ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿರುವುದು ಕಾನೂನು ಬಾಹಿರ ಮತ್ತು ಏಕಪಕ್ಷೀಯ ನಿರ್ಧಾರವೆಂದು ತಿಳಿಸಿ, ತಾನು ಇನ್ನೂ ರಾಜ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ತಮ್ಮ ಹಾಗಾಗಿ ಪಕ್ಷದ ಹುದ್ದೆಗಳಲ್ಲಿ ಮುಂದುವರೆದಿದ್ದಾರೆಂದು ತಿಳಿಸುತ್ತಾ, ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ ಒಲವು ಹೊಂದಿರುವವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿರುತ್ತಾರೆ.

ಅಲ್ಲದೇ, ನವೆಂಬರ್‌ 15ರಂದು ಕೇರಳ ರಾಜ್ಯದ ತಿರುವನಂತಪುರಂದಲ್ಲಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಕೆ ನಾನು ಅವರು ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ಕರೆದಿದ್ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ, ರಾಜ್ಯದಲ್ಲಿನ ಜೆಡಿಎಸ್-ಬಿಜೆಪಿ ಹೊಂದಾಣಿಕೆ ಬಗ್ಗೆ ವಿರೋಧಬಾಸ ಹೇಳಿಕೆ ನೀಡಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ. ಈ ಮೇಲಿನ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ಪಕ್ಷದ ಹಿಂದಿನ ರಾಜ್ಯಾಧ್ಯಕ್ಷರಾದ ಸಿ.ಎಂ ಇಬ್ರಾಹಿಂ ಅವರು ಸಾರ್ವಜನಿಕವಾಗಿ ಪಕ್ಷದ ರಾಷ್ಟ್ರಧ್ಯಕ್ಷರ, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಹಾಗೂ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ, ಪಕ್ಷದ ರಾಜ್ಯ ಪರಿಷತ್, ಶಾಸಕಾಂಗ ಪಕ್ಷದ ಸಭೆ, ಕೋ‌ರ್‌ ಸಮಿತಿ ಮುಂತಾದ ಸಭೆಗಳಲ್ಲಿ ಒಮ್ಮತವಾದ ನಿರ್ಣಯವಾಗಿದ್ದರೂ ಸಹ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿ, ಪಕ್ಷದ ಹಿತಕ್ಕೆ ಧಕ್ಕೆ ತಂದಿರುತ್ತಾರೆ, ಇಂತಹ ನಡವಳಿಕೆ ಮತ್ತು ಹೇಳಿಕೆಗಳು ಪಕ್ಷದ ವಿರೋಧಿ ಚಟುವಟಿಕೆಗಳಾಗಿರುತ್ತವೆ.

ಆದ್ದರಿಂದ, ಪಕ್ಷದ ಹಿತ ದೃಷ್ಠಿಯಿಂದ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ Article XXII-Breach of Discipline-4 ಹಾಗೂ Punishment-6ರ ಅನ್ವಯ ಸಿ.ಎಂ ಇಬ್ರಾಹಿಂ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತ್ತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

TAGGED:CM ibrahimHD Devegowdahd kumaraswamyjdsಜೆಡಿಎಸ್ಸಿಎಂ ಇಬ್ರಾಹಿಂಹೆಚ್ ಡಿ ಕುಮಾರಸ್ವಾಮಿಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
18 seconds ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
3 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
19 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
43 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
57 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?