ನವದೆಹಲಿ: ಮುಂಬೈ ಭಯೋತ್ಪಾದನಾ (Mumbai Attack) ದಾಳಿಯಾಗಿ ನವೆಂಬರ್‌ಗೆ 15 ವರ್ಷ. ಈ ಕರಾಳ ದಿನದ ಸ್ಮರಣಾರ್ಥ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ನಿಷೇಧಿಸುವುದಾಗಿ ಇಸ್ರೇಲ್ ಘೋಷಿಸಿದೆ. ಮುಂಬೈ ದಾಳಿ ಖಂಡನೀಯ ಎಂದು ಭಯೋತ್ಪಾದಕ ಸಂಘಟನೆ ವಿರುದ್ಧ ಹರಿಹಾಯ್ದಿದೆ.
ಭಾರತ ಸರ್ಕಾರದ ಯಾವುದೇ ಮನವಿ ಇಲ್ಲದೆ ಈ ಕ್ರಮ ಕೈಗೊಳ್ಳಲಾಗಿದೆ. ಲಷ್ಕರ್-ಎ-ತೈಬಾವನ್ನು (Lashkar-e-Taiba) ಇಸ್ರೇಲಿ ಅಕ್ರಮ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ನಿಯಮಗಳನ್ನು ಪೂರೈಸಿದೆ ಎಂದು ಭಾರತದಲ್ಲಿನ ಇಸ್ರೇಲ್ (Israel) ರಾಯಭಾರ ಕಚೇರಿ ಅಧಿಕೃತ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಖಲಿಸ್ತಾನಿಗಳಿಂದ ಹಿಂದೂ ದೇವಾಲಯಗಳ ಟಾರ್ಗೆಟ್: ಕ್ರಮಕ್ಕೆ ಕೆನಡಾ ಸಂಸದ ಒತ್ತಾಯ
ಇಸ್ರೇಲ್ ತನ್ನ ಗಡಿಯೊಳಗೆ ಅಥವಾ ಅದರ ಸುತ್ತಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಮಾತ್ರ ಪಟ್ಟಿ ಮಾಡಿದೆ. ನೂರಾರು ಭಾರತೀಯ ನಾಗರಿಕರು ಮತ್ತು ಇತರರ ಹತ್ಯೆಗೆ ಈ ಭಯೋತ್ಪಾದಕ ಸಂಘಟನೆ ಹೊಣೆಯಾಗಿದೆ ಎಂದು ತಿಳಿಸಿದೆ.
ಭಯೋತ್ಪಾದಕ ಸಂಘಟನೆ ದಾಳಿಯ ಸಂತ್ರಸ್ತರು, ಇಸ್ರೇಲ್ ಸೇರಿದಂತೆ ಮುಂಬೈ ದಾಳಿಯಲ್ಲಿ ಬದುಕುಳಿದ ಮತ್ತು ದುಃಖಿತ ಕುಟುಂಬಗಳಿಗೆ ಇಸ್ರೇಲ್ ಸಂತಾಪ ಸೂಚಿಸಿದೆ. ಭವಿಷ್ಯದ ಶಾಂತಿಯುತ ಸಮಾಜದ ಭರವಸೆಯಲ್ಲಿ ನಾವು ನಿಮ್ಮೊಂದಿಗೆ ಒಂದಾಗಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ
2008 ರ ನವೆಂಬರ್‌ನಲ್ಲಿ ಮುಂಬೈನಲ್ಲಿ ಹಲವಾರು ಭಯೋತ್ಪಾದಕ ದಾಳಿಗಳು ನಡೆದಿದ್ದವು. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾಗೆ ಸಂಪರ್ಕ ಹೊಂದಿದ್ದ 10 ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ಶಸ್ತ್ರಸಜ್ಜಿತವಾದ ಭಯೋತ್ಪಾದಕರು ಮುಂಬೈನ ದಕ್ಷಿಣ ಭಾಗದಲ್ಲಿ ಛತ್ರಪತಿ ಶಿವಾಜಿ ರೈಲು ನಿಲ್ದಾಣ, ಜನಪ್ರಿಯ ಲಿಯೋಪೋಲ್ಡ್ ಕೆಫೆ, ಎರಡು ಆಸ್ಪತ್ರೆಗಳು ಮತ್ತು ಥಿಯೇಟರ್ ಸೇರಿದಂತೆ ಹಲವಾರು ಸ್ಥಳಗಳಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದರು.