ಹುಬ್ಬಳ್ಳಿ: ಕಲಘಟಗಿಯ ಬಗಡಗೇರಿಯಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್- ಭಾರತದಲ್ಲಿ ಹೈಅಲರ್ಟ್
ಕೊಲೆಗೈದ ಬಳಿಕ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಪ್ರಕರಣ ದಾಖಲಾದ 24 ಗಂಟೆಗಳಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಕಲಘಟಗಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿತ್ರಾಣಗೊಂಡಿದ್ದ ಹುಲಿ ಸಾವು- ಕತ್ತು, ಮೈಮೇಲೆ ಗಾಯ