ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪಾಲಿಕೆ ಪ್ಲ್ಯಾನ್ – ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣಕ್ಕೆ ಮುಂದಾದ ಪಾಲಿಕೆ

Public TV
1 Min Read
Bengaluru BBMP TRAFFIC SURVEY

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಟ್ರಾಫಿಕ್  (Traffic) ಸಮಸ್ಯೆ ಜಾಸ್ತಿ ಆಗುತ್ತಿದೆ. ಯಾವ ಭಾಗಕ್ಕೆ ಹೋದರೂ ಸಂಚಾರ ದಟ್ಟಣೆ ಹೆಚ್ಚಾಗ್ತಿದೆ. ಬಿಬಿಎಂಪಿ (BBMP) ಟ್ರಾಫಿಕ್ ಸ್ಪಾಟ್‌ಗಳನ್ನು ಗುರುತಿಸಿ ಸರ್ವೆಗೆ ಮುಂದಾಗಿದೆ. ಸರ್ವೆ ನಡೆಸಲು ಟೆಂಡರ್ ಕರೆದಿದೆ. ಸರ್ವೆ ಮುಗಿದ ಬಳಿಕ 12 ಕಡೆ ಮೇಲ್ಸೇತುವೆ ಅಂಡರ್ ಪಾಸ್ (Underpass) ನಿರ್ಮಾಣಕ್ಕೆ ಮುಂದಾಗಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಸಂಚಾರ ದಟ್ಟಣೆ ಬಗ್ಗೆ ಚರ್ಚೆ ಆಗುತ್ತಿದೆ. ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಈಗಾಗಲೇ ಹಲವಾರು ಕ್ರಮಗಳನ್ನು ಜರುಗಿಸಿದ್ದಾರೆ. ಈಗ ಮತ್ತೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಬಿಬಿಎಂಪಿ ನಗರದಲ್ಲಿ ಸರ್ವೆ ನಡೆಸಲು ಮುಂದಾಗಿದೆ. ಖಾಸಗಿ ಸಂಸ್ಥೆಗೆ ಟೆಂಡರ್ ನೀಡಿ ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ, ಪರಿಹಾರ ಏನು ಎಂಬುದನ್ನು ವರದಿ ನೀಡಲು ಸೂಚಿಸಿದೆ. ಶೀಘ್ರದಲ್ಲೇ ಸರ್ವೆ ಆರಂಭ ಆಗಲಿದೆ. ಇದನ್ನೂ ಓದಿ: ಹಣ ಲಪಟಾಯಿಸಿದ್ರೂ ಬಿಡದಿ ಇನ್ಸ್‌ಪೆಕ್ಟರ್‌ ಸಸ್ಪೆಂಡ್ ಯಾಕಿಲ್ಲ?- ಭ್ರಷ್ಟನಿಗೆ ರಾಜಕೀಯ ರಕ್ಷಣೆ ಎಂದ ಮಾಜಿ ಶಾಸಕ

ಟ್ರಾಫಿಕ್ ಜಾಮ್ ಆಗುವ ರಸ್ತೆಯಲ್ಲಿ ದಿನಕ್ಕೆ ಎಷ್ಟು ವಾಹನ ಓಡಾಡುತ್ತಿವೆ. ಟ್ರಾಫಿಕ್ ಜಾಮ್ ಆಗಲಿಕ್ಕೆ ಕಾರಣ ಹುಡುಕಬೇಕಿದೆ. ಎಲ್ಲೆಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಬೇಕು. ಫ್ಲೈಓವರ್ ನಿರ್ಮಾಣ ಮಾಡಬೇಕು ಎಂದು ವರದಿ ನಿರ್ಧಾರ ಮಾಡಲಿದ್ದಾರೆ. ಈಗಾಗಲೇ ಗೊರಗುಂಟೆಪಾಳ್ಯ, ತುಮಕೂರು ರಸ್ತೆ, ಸ್ಯಾಂಡಲ್‌ಸೋಪ್ ಫ್ಯಾಕ್ಟರಿ, ಹೆಬ್ಬಾಳ, ಟಿನ್ ಫ್ಯಾಕ್ಟರಿ, ಸಿಲ್ಕ್ ಬೋರ್ಡ್ ಈ ಭಾಗಗಳಲ್ಲಿ ಫ್ಲೈಓವರ್ ಇದ್ದರೂ ಟ್ರಾಫಿಕ್ ಜಾಮ್ ಆಗುತ್ತಿದೆ. ಇದಕ್ಕೆ ಸೂಕ್ತ ಕಾರಣ ಪತ್ತೆ ಹಚ್ಚಿ ಪರಿಹಾರ ಏನು ಎಂದು ಕಂಡುಕೊಂಡು ವರದಿ ನೀಡಲಿದ್ದಾರೆ. ಇದನ್ನೂ ಓದಿ: ಮಡಿಕೇರಿಯ ಈ ಗ್ರಾಮದ 30 ಯುವಕರಿಗಿಲ್ಲ ಕಂಕಣ ಭಾಗ್ಯ

ಬಿಬಿಎಂಪಿ ಟ್ರಾಫಿಕ್ ಜಾಮ್ ಬಗ್ಗೆ ಸರ್ವೆ ನಡೆಸಲು ಮುಂದಾಗಿದ್ದು, ಸರ್ವೆ ಆದ ಬಳಿಕ ಎಲ್ಲೆಲ್ಲಿ ಅಂಡರ್ ಪಾಸ್ ನಿರ್ಮಾಣ, ಮತ್ತೆ ಫ್ಲೈಓವರ್ ನಿರ್ಮಾಣ ಮಾಡಲಿದೆಯೋ ಕಾದು ನೋಡಬೇಕಿದೆ. ಇದನ್ನೂ ಓದಿ: ಕಡ್ಲೆಕಾಯಿ ಪರಿಷೆಯ ತುತ್ತೂರಿ ವಿರುದ್ಧ ಬಸವನಗುಡಿ ನಿವಾಸಿಗಳು ಗರಂ!

Share This Article