ನಮ್ಮ ಜಾಹೀರಾತಿನಲ್ಲಿ ಮತ ಯಾಚನೆ ಮಾಡಿಲ್ಲ, ಇದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ: ಡಿಕೆಶಿ

Public TV
1 Min Read
dk shivakumar

ಬೆಂಗಳೂರು: ತೆಲಂಗಾಣದಲ್ಲಿ (Telangana) ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ಇದು ನೀತಿ ಸಂಹಿತೆ (Code Of Conduct) ಉಲ್ಲಂಘನೆ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ತೆಲಂಗಾಣದ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ (Guarantee Scheme) ಜಾಹೀರಾತಿನ (Advertising) ವಿಚಾರವಾಗಿ ಚುನಾವಣಾ ಆಯೋಗ ನೋಟಿಸ್ ಜಾರಿ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಜಾಹೀರಾತಿನಲ್ಲಿ ಸರ್ಕಾರದ ಕೆಲಸದ ಬಗ್ಗೆ ಮಾಹಿತಿ ಇದೆ. ಕಾಂಗ್ರೆಸ್ (Congress) ಪಕ್ಷಕ್ಕೆ ಅಥವಾ ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ಜಾಹೀರಾತಿನಲ್ಲಿ ತಿಳಿಸಿಲ್ಲ. ಇದು ಉಲ್ಲಂಘನೆ ಹೇಗೆ ಆಗುತ್ತದೆ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ ಎಂದು ಅವರು ಅಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ:  3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲಾ: ಸಿ.ಟಿ ರವಿ

ನಾವು ಪತ್ರಿಕೆ ಹಾಗೂ ಮ್ಯಾಗಜಿನ್‌ಗಳಲ್ಲಿ ನೀಡುವ ಜಾಹೀರಾತು ಕೆಲವೊಮ್ಮೆ ತೆಲಂಗಾಣ, ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಗೂ ಹೋಗುತ್ತದೆ. ನಾವು ಮತ ಯಾಚನೆ ಮಾಡಿದ್ದರೆ ಆಗ ನಿಯಮ ಉಲ್ಲಂಘನೆ ಆಗುತ್ತಿತ್ತು. ಚುನಾವಣಾ ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸ್ವಚ್ಚತೆ, ನೈರ್ಮಲ್ಯ ಸಂರಕ್ಷಣೆಗೆ ಸ್ಥಳೀಯ ಸಂಸ್ಥೆಗಳಿಗೆ 2 ಸಾವಿರ ಕೋಟಿ ಅನುದಾನ: ಡಿಕೆಶಿ

ನಿಗಮ ಮಂಡಳಿ ನೇಮಕ ಸಭೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ಈಗಾಗಲೇ ಎರಡು ಮೂರು ಸುತ್ತಿನ ಸಭೆಗಳು ನಡೆದಿವೆ. ಇಂದು ಕೂಡ ಸಭೆ ಮಾಡಿ ಪಟ್ಟಿಯನ್ನು ದೆಹಲಿಗೆ ರವಾನಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂರ ಜನಸ್ಪಂದನವನ್ನು ಅಭಿನಂದಿಸುತ್ತೇನೆ, ಎಲ್ಲವನ್ನು ಟೀಕಿಸಲ್ಲ: ಹೆಚ್‌ಡಿಕೆ

Share This Article