ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ – ಸಿಎಂಗೆ ಪತ್ರ ಬರೆದ ಬಿಆರ್‌ ಪಾಟೀಲ್‌

Public TV
1 Min Read
aland Congress mla br patil

ಬೆಂಗಳೂರು/ಕಲಬುರಗಿ: ರಾಜ್ಯ ಕಾಂಗ್ರೆಸ್‌ನಲ್ಲಿ (Congress) ಎಲ್ಲವೂ ಸರಿಯಿಲ್ಲ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ. ಇದಕ್ಕೆ ಪೂರಕವಾಗಿ ಹಿರಿಯ ನಾಯಕ ಆಳಂದ ಕ್ಷೇತ್ರದ ಶಾಸಕ ಬಿಆರ್ ಪಾಟೀಲ್ (BR Patel) ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ (Resignation) ನೀಡುವ ಸುಳಿವು ನೀಡಿದ್ದಾರೆ.

ನನ್ನ ಮೇಲಿನ ಆರೋಪ ಸಾಬೀತಾದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಪತ್ರ ಬರೆದಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

aland Congress mla br patil wrote a letter to CM siddaramaiah and warned him to resign 1

ಪತ್ರದಲ್ಲಿ ಏನಿದೆ?
2013ರಲ್ಲಿ ಕಾಮಗಾರಿಗಳನ್ನು ನಾನು ಕೆಆರ್‌ಐಡಿಎಲ್‌ಗೆ (KRIDL)ನೀಡಿದ್ದೆ. ಆದರೆ ಕಾರಣಾಂತರಗಳಿಂದ ಅವು ಪೂರ್ಣವಾಗಿಲ್ಲ. ಈ ಬಗ್ಗೆ ನಾನು ಕಳೆದ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದಾಗ ನನ್ನನ್ನೇ ಅನುಮಾನದಿಂದ ನೋಡಲಾಯಿತು. ಸಚಿವ ಪ್ರಿಯಾಂಕ್ ಖರ್ಗೆ ಅನುಪಸ್ಥಿತಿಯಲ್ಲಿ ಸಚಿವ ಕೃಷ್ಣ ಭೈರೇಗೌಡ ನನ್ನ ಮೇಲೆ ಅನುಮಾನ ಬರುವಂತೆ ಮಾತನಾಡಿದರು. ಇದನ್ನೂ ಓದಿ: 3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲಾ: ಸಿ.ಟಿ ರವಿ

aland Congress mla br patil wrote a letter to CM siddaramaiah and warned him to resign 2

ಕೆಆರ್‌ಐಡಿಎಲ್ ಕಡೆಯಿಂದ ನಾನು ಹಣ ಪಡೆದು ಭೂಸೇನೆಗೆ ಕಾಮಗಾರಿ ಕೊಟ್ಟಿದ್ದೇನೆ ಎನ್ನುವ ಅರ್ಥದಲ್ಲಿ ಹೇಳಿಕೆ ಕೊಟ್ಟರು. ಅದಾದ ಮೇಲೂ ಪ್ರಿಯಾಂಕ್ ಖರ್ಗೆ ಕಾಮಗಾರಿಗಳ ಕುರಿತು ಸಭೆ ನಡೆಸಲಿಲ್ಲ. ಇಂಥ ಆರೋಪ ಹೊತ್ತು ನಾನು ಅಧಿವೇಶನಕ್ಕೆ ಹಾಜರಾಗುವುದು ಸರಿಯಲ್ಲ. ಆರೋಪಗಳನ್ನು ಹೊತ್ತು ಸದನಕ್ಕೆ ಬಂದರೆ ನಾನು ಆರೋಪ ಒಪ್ಪಿಕೊಂಡಂತೆ ಆಗುತ್ತದೆ. ಹೀಗಾಗಿ ನನ್ನ ಮೇಲೆ ಬಂದ ಆರೋಪದ ಬಗ್ಗೆ ತನಿಖೆ ನಡೆಸಿ. ಸತ್ಯಾಸತ್ಯತೆ ಹೊರ ಬರಲು ತನಿಖೆಗೆ ಆದೇಶ ನೀಡಿ. ಆರೋಪ ಸಾಬೀತಾದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ ಎಂದು ಬಿಆರ್ ಪಾಟೀಲ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಇಂತಹ ಯಾವ ಪತ್ರವೂ ನನಗೆ ಬಂದಿಲ್ಲ. ಬಂದಿದ್ದರೆ ನೋಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ. ಆದರೆ ಇದು ನಕಲಿ ಪತ್ರವಲ್ಲ, ಅಸಲಿ ಪತ್ರ ಎಂದು ಹೇಳಲಾಗುತ್ತಿದೆ.

 

Share This Article