ಕನ್ನಡ ಸಿನಿಮಾ ಸೆನ್ಸಾರ್ ಮಾಡಲು ಲಂಚ ಬೇಡಿಕೆ: ಅಧಿಕಾರಿ ಸಿಬಿಐ ಬಲೆಗೆ

Public TV
1 Min Read
Prashant Kumar

ಕೆಲ ತಿಂಗಳ ಹಿಂದೆಯಷ್ಟೇ ಕೇಂದ್ರ ಸೆನ್ಸಾರ್  (Censor) ಮಂಡಳಿಯಲ್ಲಿ ಲಂಚ ತಗೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ತಮಿಳು ನಟ ವಿಶಾಲ್ ತಮ್ಮ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಕೊಡಲು ಮೂವರು ಅಧಿಕಾರಿಗಳು ಲಕ್ಷ ಲಕ್ಷ ರೂಪಾಯಿ ಲಂಚ ತೆಗೆದುಕೊಂಡಿದ್ದಾರೆ ಎಂದು ಸಾಕ್ಷಿ ಸಮೇತ ಹಿಡಿದುಕೊಟ್ಟಿದ್ದರು. ಸದ್ಯ ಅಧಿಕಾರಿಗಳ ವಿಚಾರಣೆ ನಡೆಯುತ್ತಿದೆ. ಈ ಘಟನೆ ಮಾಸುವ ಮುನ್ನವೇ ಕನ್ನಡದಲ್ಲೂ ಇಂಥದ್ದೊಂದು ಪ್ರಕರಣ ಬೆಳಕಿಗೆ ಬಂದಿದೆ.

Tiger Naga

ಸಂವಿಧಾನ ಸಿನಿ ಕಂಬೈನ್ಸ್ ನಿರ್ಮಾಣದ ಅಡವಿ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಕೊಡಲು ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ಪ್ರಶಾಂತ್ ಕುಮಾರ್ (Prashant Kumar) ಎನ್ನುವವರು ಹನ್ನೆರಡು ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗುತ್ತಿದೆ. ಸಿನಿಮಾದಲ್ಲಿನ ಸಬ್ ಟೈಟಲ್ ವಿಚಾರವಾಗಿ ಕ್ಯಾತೆ ತೆಗೆದಿದ್ದ ಅಧಿಕಾರಿ ಸರ್ಟಿಫಿಕೇಟ್ ನೀಡಲು ನಿರಾಕರಿಸಿದ್ದರು ಎಂದು ಹೇಳಲಾಗುತ್ತಿದ್ದು, ಚಿತ್ರ ನಿರ್ಮಾಪಕ ಟೈಗರ್ ನಾಗ್ (Tiger Naga), ಸಿಬಿಐ (CBI) ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದರು.

ಟೈಗರ್ ನಾಗ್ ಕೊಟ್ಟ ದೂರಿನನ್ವಯ ಸಿಬಿಐ ಅಧಿಕಾರಿಗಳು ನವೆಂಬರ್ 28ರ ಸಂಜೆ ಆರು ಗಂಟೆಗೆ ಅಧಿಕಾರಿ ಲಂಚ ಪಡೆಯುವ ಸಂದರ್ಭದಲ್ಲೇ ದಾಳಿ ಮಾಡಿದ್ದಾರೆ. ಹತ್ತಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ದಾಳಿ ಮಾಡಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆಯಷ್ಟೇ ಮಲ್ಲೇಶ್ವರಂ ಥಿಯೇಟರ್ ವೊಂದರಲ್ಲಿ ಅಧಿಕಾರಿ ಅಡವಿ ಸಿನಿಮಾವನ್ನು ವೀಕ್ಷಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

Share This Article