ತಂಬಾಕು ಚೀಲಗಳಲ್ಲಿ ತುಂಬಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 8 ಕೋಟಿ ಹಣ ಜಪ್ತಿ

Public TV
1 Min Read
chitradurga

ಚಿತ್ರದುರ್ಗ: ದಾಖಲೆ ಇಲ್ಲದೆ ಚಿತ್ರದುರ್ಗದಿಂದ (Chitradurga) ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 8 ಕೋಟಿ ರೂ. ಹಣವನ್ನು (Money)  ಹೊಳಲ್ಕೆರೆ ಪೊಲೀಸರು (Holalkere Police) ಜಪ್ತಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಇನೋವಾ ಕಾರಿನಲ್ಲಿ ತೆರಳುತಿದ್ದ ಚಾಲಕ ಸಚಿನ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾರಿನಲ್ಲಿ ತಂಬಾಕು ಚೀಲಗಳಲ್ಲಿ ತುಂಬಲಾಗಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

chitradurga holalkere police station

ಈ ಹಣ ಚಿತ್ರದುರ್ಗದ ಅಡಿಕೆ ವರ್ತಕರಿಗೆ ಸೇರಿದ್ದು ಎಂಬ ಅನುಮಾನವಿದ್ದು, ಖಚಿತ ಮಾಹಿತಿಗಾಗಿ ಆದಾಯ ತೆರಿಗೆ ಅಧಿಕಾರಿಗಳಿಗೆ ಈ ಮಾಹಿತಿಯನ್ನು ನೀಡಲಾಗಿದೆ. ವಿಚಾರಣೆ ಬಳಿಕ ಈ ಹಣ ಯಾರಿಗೆ ಸೇರಿದ್ದು ಹಾಗೂ ಯಾವ ಕಾರಣಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ತಿಳಿಯಲಿದೆ ಎಂದು ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ

ಜಪ್ತಿಯಾಗಿರುವ ಭಾರೀ ಮೊತ್ತದ ಹಣ ಎಣಿಕೆ ಕಾರ್ಯವನ್ನು ಹೊಳಲ್ಕೆರೆ ಪೊಲೀಸರು ಕೈಗೊಂಡಿದ್ದಾರೆ. ಈ ಪ್ರಕರಣ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಗೆಳೆಯನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ಹೋಗಿದ್ದ ಅಂಜು ತವರಿಗೆ ವಾಪಸ್

Share This Article