ಮಡಿಕೇರಿ: ಮೈಸೂರು ಜಿಲ್ಲೆ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರಾಗಿ (Doctor) ಕಾರ್ಯನಿರ್ವಹಿಸುತ್ತಿದ್ದ ಡಾ. ಸತೀಶ್ ಅವರು ಕೊಡಗಿನ ಕುಶಾಲನಗರ ತಾಲೂಕಿನ ಆನೆಕಾಡು ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಾ. ಸತೀಶ್ (47) ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ (Fetal Killing) ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿಬಂದಿತ್ತು. ಇನ್ನು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಅವರ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ತಲೆಮರೆಸಿಕೊಂಡಿದ್ದರು.
ರಾಜ್ಯ ಸರ್ಕಾರ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಈ ಪ್ರಕರಣದಲ್ಲಿ ಸಿಲುಕುವ ಭಯದಿಂದ ವೈದ್ಯ ಸತೀಶ್ ಕಾರಿನಲ್ಲಿ ಆನೆಕಾಡಿಗೆ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿ, ಸ್ವತಃ ವಿಷಕಾರಿ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಭ್ರೂಣ ಪತ್ತೆ, ಹತ್ಯೆ ಪ್ರಕರಣ ಬೆಳಕಿಗೆ ಬಂದ ಹೊತ್ತಲ್ಲೇ ವೈದ್ಯ ಅನುಮಾನಾಸ್ಪದ ಸಾವು
ಈ ಬಗ್ಗೆ ತನಿಖೆಯಿಂದ ನೈಜ ಸಂಗತಿ ಹೊರಬರಲಿದೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಸ್ಥಳ ಮಹಜರು ಮಾಡಿದ್ದು ಮೃತದೇಹವನ್ನು ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲು ದುರ್ಬಲ ನಾಯಕತ್ವವೇ ಕಾರಣ: ಗೋವಿಂದ ಕಾರಜೋಳ