ಭಾರತದ ವಿರುದ್ಧ ಉಗ್ರ ಚಟುವಟಿಕೆಗಳಲ್ಲಿ ಭಾಗಿ – ಖಲಿಸ್ತಾನಿ ಭಯೋತ್ಪಾದಕ ಪಾಕ್‌ನಲ್ಲಿ ಸಾವು

Public TV
1 Min Read
Lakhbir Singh Rode

ಇಸ್ಲಾಮಾಬಾದ್: ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಲಖ್ಖೀರ್‌ ಸಿಂಗ್‌ ರೋಡ್‌ ಹೃದಯಾಘಾತದಿಂದ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ.

ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಸೋದರಳಿಯ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ (72), ಭಿದ್ರಾನ್‌ವಾಲೆ ಸಾವಿನ ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿದ್ದ. ಡಿ.2 ರಂದು ಲಖ್ಖೀರ್‌ ಕೂಡ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಗಾಜಾ ಸುರಂಗಗಳಲ್ಲಿ ಮಹಾ ಪ್ರವಾಹ ಸೃಷ್ಟಿಸಲು ಇಸ್ರೇಲ್‌ ಪ್ಲ್ಯಾನ್‌

ಲಖ್ಖೀರ್‌ ಸಿಂಗ್‌ ರೋಡ್ (Lakhbir Singh Rode) ನಿಷೇಧಿತ ಸಂಘಟನೆ ‘ಖಲಿಸ್ತಾನ್ ಜಿಂದಾಬಾದ್ ಫೋರ್ಸ್’ ಮುಖ್ಯಸ್ಥನಾಗಿದ್ದ. ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ. ಗುಪ್ತಚರ ಸಂಸ್ಥೆಗಳ ಪ್ರಕಾರ, ಆತ ಲಾಹೋರ್‌ನಲ್ಲಿ ವಾಸಿಸುತ್ತಿದ್ದ.

ಪಂಜಾಬ್‌ಗೆ ಡ್ರಗ್ಸ್, ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ಬಾಂಬ್‌ಗಳನ್ನು ಕಳುಹಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈತ ರಾಜ್ಯದ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಶಂಕಿಸಲಾಗಿತ್ತು. ಒಮ್ಮೆ ಆತನನ್ನು ನೇಪಾಳದಲ್ಲಿ 20 ಕೆಜಿ ಸ್ಫೋಟಕ ಆರ್‌ಡಿಎಕ್ಸ್‌ನೊಂದಿಗೆ ಬಂಧಿಸಲಾಗಿತ್ತು. ಸ್ಫೋಟಕವನ್ನು ಪಾಕಿಸ್ತಾನದಿಂದ ತಂದಿದ್ದಾಗಿ ಪೊಲೀಸರಿಗೆ ತಿಳಿಸಿದ್ದ. ಇದನ್ನೂ ಓದಿ: ಭಾರತಕ್ಕೆ ಬೇಕಾಗಿದ್ದ ಉಗ್ರನಿಗೆ ಪಾಕ್‌ ಜೈಲಿನಲ್ಲೇ ವಿಷ ಪ್ರಾಶನ!

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಕ್ಟೋಬರ್‌ನಲ್ಲಿ ದಾಳಿ ನಡೆಸಿ ಪಂಜಾಬ್‌ನ ಮೊಗಾದಲ್ಲಿರುವ ಈತನ ಆಸ್ತಿಗಳನ್ನು ಜಪ್ತಿ ಮಾಡಿತ್ತು. 2021 ಮತ್ತು 2023 ರ ನಡುವೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ರೋಡ್ ವಿರುದ್ಧದ ಆರು ಭಯೋತ್ಪಾದಕ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿತ್ತು.

Share This Article