ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆ ಮುಂದೂಡಿಕೆ

Public TV
1 Min Read
INDIA Meeting Leaders Congress AAP

ನವದೆಹಲಿ: ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆ ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ.

ಪಂಚರಾಜ್ಯಗಳ ಚುನಾವಣೆ ಹಿನ್ನಲೆ ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ (Lok Sabha Election) ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌.

ಮಿಚಾಂಗ್‌ ಚಂಡಮಾರುತದಿಂದ (Cyclone Michaung) ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರು ದೆಹಲಿಗೆ ಭೇಟಿ ನೀಡಲು ಮತ್ತು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆsonia rahul mamata mallkrjun kharege INDIA

ನಿತೀಶ್ ಕುಮಾರ್ ಅವರು ಅಸ್ವಸ್ಥರಾಗಿದ್ದು, ಪಶ್ಚಿಮ‌ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸಭೆಗೆ ಗೈರಾಗುವ ಬಗ್ಗೆ‌‌ ಮೊದಲೇ ಮಾಹಿತಿ‌ ನೀಡಿದ್ದರು. ಇದನ್ನೂ ಓದಿ: ಹಾಡಹಗಲೇ ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಕೊಲೆ

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡಾ ಸಭೆಯಲ್ಲಿ ಭಾಗಿಯಾಗಿರುವ ಖಚಿತ ಪಡಿಸಿದ್ದರು. ಆಮ್ ಆದ್ಮಿ ಪಕ್ಷವು ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ದೃಢೀಕರಣ ನೀಡಿರಲಿಲ್ಲ.

ಪ್ರಮುಖ ನಾಯಕರ ಅಲಭ್ಯತೆ ಹಿನ್ನಲೆ ಸಭೆಯನ್ನು ಮುಂದೂಡಲು ನಿರ್ಧರಿಸಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೆ ಸಭೆಗೆ ದಿನಾಂಕ‌ ನಿಗದಿ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. ಸಭೆ ರದ್ದಾದ ಹಿನ್ನಲೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

 

ಕಡೆಯ ಒಕ್ಕೂಟದ ಸಭೆಯನ್ನು ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಆಯೋಜಿಸಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಐದು ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು. ಎರಡು ದಿನಗಳ ಚರ್ಚೆಗಳಲ್ಲಿ, ಮೈತ್ರಿಯು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಪ್ರಮುಖ ಚುನಾವಣಾ ವಿಷಯಗಳನ್ನು ಚರ್ಚಿಸಿ ಸಮನ್ವಯ ಸಮಿತಿಯನ್ನು ರಚಿಸಿತು. ಲೋಕಸಭಾ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಾಗಿ ಹೋರಾಡಲು ಮೂರು ಅಂಶಗಳ ನಿರ್ಣಯವನ್ನು ಅಂಗೀಕರಿಸಿತು.

Share This Article