ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಶಿರಸಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

Public TV
1 Min Read
Bus Accident

ಕಾರವಾರ: ಕಾರು ಮತ್ತು ಸರ್ಕಾರಿ ಬಸ್ಸಿನ ನಡುವೆ ನಡೆದ ಭೀಕರ ಅಪಘಾತದಲ್ಲಿ (Bus Car Accident) ಐವರು ಮೃತಪಟ್ಟಿರುವ ಘಟನೆ ಶುಕ್ರವಾರ (ಇಂದು) ಉತ್ತರ ಕನ್ನಡ ಜಿಲ್ಲೆಯ ಶಿರಸಿ (Shirsi) ತಾಲೂಕಿನ ಬಂಡಲದಲ್ಲಿ ನಡೆದಿದೆ.

Bus Accident 2

ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸು ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು ಎನ್ನಲಾಗಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ತಮಿಳುನಾಡಿನ (TamilNadu) ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಬರ ಪರಿಹಾರಕ್ಕೆ ಇನ್ನೆರಡು ದಿನಗಳಲ್ಲಿ ಮಾನದಂಡ ಬಿಡುಗಡೆ: ಚೆಲುವರಾಯಸ್ವಾಮಿ

ಬಸ್‌ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರಿದ್ದು ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ (Shirsi Rural Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ

Share This Article