ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದವ ಅರೆಸ್ಟ್

Public TV
1 Min Read
ARREST 1

ಮೈಸೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ನ್ಯಾಯಾಲಯದ ನಿವೃತ್ತ ಗುಮಾಸ್ತನೊಬ್ಬನನ್ನು ಟಿ.ನರಸೀಪುರ ಪೊಲೀಸರು (Police) ಬಂಧಿಸಿದ್ದಾರೆ.

ಟಿ.ನರಸೀಪುರ (T. Narasipura) ಪಟ್ಟಣದ ಹೌಸಿಂಗ್ ಬೋರ್ಡ್‍ನ ನಿವಾಸಿ ಜಗದೀಶ್ ಬಂಧಿತ ಆರೋಪಿಯಾಗಿದ್ದಾನೆ. ಆತ ಪಟ್ಟಣದ ನ್ಯಾಯಾಲಯದಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದ. ಆರೋಪಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೇ ಈ ವಿಚಾರ ಪೋಷಕರಿಗೆ ತಿಳಿಸಿದರೆ ಕೊಲ್ಲುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದ ಎಂಬ ಆರೋಪಗಳು ಕೇಳಿ ಬಂದಿದೆ. ಇದನ್ನೂ ಓದಿ: ಮಿನಿ ಬಸ್‌ಗೆ ಕಾರು ಡಿಕ್ಕಿ – ಪ್ರೇಮಿಗಳ ದಾರುಣ ಸಾವು

ಆರೋಪಿಯನ್ನು ವಿಚಾರಿಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಆತ ಯಾವುದೇ ಕಾರಣಕ್ಕೂ ಶಿಕ್ಷೆಯಿಂದ ಪಾರಾಗಬಾರದು. ಆತನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರು ಅಡ್ಡಗಟ್ಟಿ 50 ಲಕ್ಷ ರೂ. ಹಣ ದೋಚಿದ ಕಿಡಿಗೇಡಿಗಳು

Share This Article