ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ (Gang Rape) ಎಸಗಿರುವ ಭಯಾನಕ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. 10 ವರ್ಷದ ಬಾಲಕಿಗೆ ಚಾಕು ತೋರಿಸಿ 14 ಹಾಗೂ 16 ವರ್ಷದ ಇಬ್ಬರು ಅಪ್ರಾಪ್ತರೇ ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೇ ಪರಸ್ಪರ ಮೊಬೈಲ್‌ನಲ್ಲಿ ವೀಡಿಯೋ ಮಾಡಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಗೂ ಕಾಲಿಟ್ಟ ಕೊರೊನಾ ವೈರಸ್- ಗೋವಾದಿಂದ ಬಂದಿದ್ದ ಯುವಕನಲ್ಲಿ ಸೋಂಕು ಪತ್ತೆ
ಸಂತ್ರಸ್ತ ಬಾಲಕಿಯ ಹೆತ್ತವರು ಮುಂಬೈನಲ್ಲಿದ್ದು, ಆಕೆ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಿಕ್ಷಣ ಪಡೆಯುತ್ತಿದ್ದಳು. ಘಟನೆ ಬಗ್ಗೆ ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಕೊರೊನಾ ಹೆಚ್ಚಳ – ಕರ್ನಾಟಕದಲ್ಲಿ ಮಾರ್ಗಸೂಚಿ ಪ್ರಕಟ