5 ದಿನಗಳ ಹಿಂದೆ ಬೆಂಗ್ಳೂರಿನಲ್ಲಿ ಕೊರೊನಾದಿಂದ ವ್ಯಕ್ತಿ ಸಾವು: ದಿನೇಶ್ ಗುಂಡೂರಾವ್

Public TV
2 Min Read
DINESH GUNDURAO 1

ಬೆಂಗಳೂರು: ಐದು ದಿನಗಳ ಹಿಂದೆಯಷ್ಟೇ ಕೊರೊನಾ ವೈರಸ್‍ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯ (Chamarajapete) 64 ವರ್ಷದ ನಿವಾಸಿಗೆ ಕೊರೊನಾ ಜೊತೆ ಅನ್ಯ ಕಾಯಿಲೆಗಳು ಕೂಡ ಇದ್ದವು. ಟಿಬಿ, ಬಿಪಿ ಸೇರಿದಂತೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ನಡುವೆ ಕೊರೊನಾ ಪಾಸಿಟಿವ್ (Corona Virus) ಕೂಡ ಆಗಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು 5 ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಮೃತ ವ್ಯಕ್ತಿಯ ಕುಟುಂಬದಲ್ಲಿ ಒಟ್ಟು 5 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ವೇಳೆ ಐವರಿಗೂ ನೆಗೆಟಿವ್‌ ಬಂದಿದೆ. ಸದ್ಯ ಐದು ಜನರು ಕೂಡ ಕ್ವಾರಂಟೈನ್ ನಲ್ಲಿ ಇದ್ದಾರೆ. ಮೃತಪಟ್ಟ ಆದ ವ್ಯಕ್ತಿಯ ಜೆನೆಮಿಕ್ ಸೀಕ್ವೆನ್ಸ್ ರಿಪೋರ್ಟ್ ಗಾಗಿ ಬಿಬಿಎಂಪಿ ಕಾಯುತ್ತಿದೆ ಎಂದರು.

ಮೂರು ತಿಂಗಳಿಂದ ಇದು ಹೆಚ್ಚಾಗಿದೆ. ಆಗಸ್ಟ್ ನಲ್ಲಿ ಈ ಉಪತಳಿ ಕಾಣಿಸಿಕೊಂಡಿದೆ. ವೇಗವಾಗಿ ಹಬ್ಬುವ ವೈರಾಣು ಇದಾಗಿದ್ದು, ಒಮಿಕ್ರಾನ್ ರೀತಿಯಲ್ಲಿ ವರ್ತನೆ ಇದೆ. ತೀರಾ ಹಾನಿಕಾರಿ ವೈರಾಣು ಅಲ್ಲ. ದೇಶದಲ್ಲಿ ಇಂಥದ್ದು 20 ಪ್ರಕರಣ ಇದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿಂದು 44 ಮಂದಿಗೆ ಕೊರೊನಾ ಪಾಸಿಟಿವ್!

ಕರ್ನಾಟಕ ಅತಿ ಹೆಚ್ಚು ಟೆಸ್ಟಿಂಗ್ ಮಾಡುತ್ತಿದ್ದೇವೆ. ದೇಶದಲ್ಲಿ ಹೆಚ್ಚು ಟೆಸ್ಟಿಂಗ್ ನಮ್ಮಲ್ಲಿ ಇದೆ. 772 ಮಂಗಳವಾರ ಒಂದೇ ದಿನ ಟೆಸ್ಟಿಂಗ್ ಮಾಡಿದ್ದೇವೆ. ಸಾರಿ ಮತ್ತು ಐಎಲ್ ಐ ಕುರಿತು ಟ್ರೇಸ್ ಮಾಡೋಕೆ ಅಡ್ವೈಸರಿ ಮಾಡ್ತೇವೆ ಎಂದು ಹೇಳಿದರು.

ಕೇಂದ್ರದ ಪ್ರಕಾರ 36 ರಾಷ್ಟ್ರಗಳಲ್ಲಿ ಬಂದಾಗಿದೆ. ಆಕ್ಸಿಜನ್ ಸಪ್ಲೈ ಐಸೋಲೇಷನ್ ಬಗ್ಗೆ ನಿಗಾ ವಹಿಸಲು ಸೂಚನೆ ಕೊಟ್ಟಿದ್ದಾರೆ. ವೆಂಟಿಲೇಟರ್ ನಿರ್ವಹಣೆ ಖರ್ಚು ಹೆಚ್ಚಾಗುತ್ತಿದೆ. ಹೀಗಾಗಿ ಕೇಂದ್ರದ ನೆರವು ಕೋರಿದ್ದೇವೆ. ಕೇರಳ (Kerala) ಸಚಿವರು ಕೂಡ ಮಾತಾನಾಡಿದ್ದಾರೆ. ಐದು ಜನ ಕೇರಳದಲ್ಲಿ ಸಾವನ್ನಪ್ಪಿದ್ದಾರೆ ಎಂದರು.

ನಾಳೆ ಸಿಎಂ ಜೊತೆ ಸಭೆ ಇದೆ. ಹೆಚ್ಚು ಜನಜಂಗುಳಿ ಇರುವ ಭಾಗದಲ್ಲಿ ಮಾಸ್ಕ್ (Mask) ಧರಿಸಿ, ಕುಟುಂಬಸ್ಥರ ಹೋಂ ಐಸೋಲೇಷನ್ ಬಿಬಿಎಂಪಿ (BBMP) ಮಾಡಲಿದೆ. ಬಿಬಿಎಂಪಿಗೆ ಮಾಹಿತಿ ಕೊಟ್ಟಿದ್ದೇವೆ ಎಂದರು.

Share This Article