ಒಂದೇ ವೇದಿಕೆಯಲ್ಲಿ 1 ಲಕ್ಷ ಜನರಿಂದ ಭಗವದ್ಗೀತೆ ಶ್ಲೋಕ ಪಠಣ

Public TV
1 Min Read
bhagavad gita kolkata 1

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 1 ಲಕ್ಷ ಜನರು ಸಾಮೂಹಿಕವಾಗಿ ಭಗವದ್ಗೀತೆಯ (Bhagavad Gita) ಪವಿತ್ರ ಶ್ಲೋಕಗಳನ್ನು ಪಠಿಸಿ, ದಾಖಲೆ ಬರೆದಿದ್ದಾರೆ.

ಸಾಂಪ್ರದಾಯಿಕ ವೇಷಭೂಷಣಗಳಲ್ಲಿ ಪಾಲ್ಗೊಂಡಿದ್ದ ವಿವಿಧ ವಯೋಮಾನದ ಜನರು ಸಾಂಪ್ರದಾಯಿಕ ಸ್ಥಳದಲ್ಲಿ ಸಮಾವೇಶಗೊಂಡು, ಪೂಜ್ಯ ಋಷಿಗಳೊಂದಿಗೆ ಪವಿತ್ರ ಪುಸ್ತಕದ ಶ್ಲೋಕಗಳನ್ನು ಪಠಿಸಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರ ಉದ್ಘಾಟನೆಗೆ ನೇಪಾಳದಿಂದ ಬರ್ತಿದೆ ಚಿನ್ನಾಭರಣ, ವಸ್ತ್ರ, ಸಿಹಿತಿನಿಸು

bhagavad gita kolkata

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್, ‘ಭಗವದ್ಗೀತೆ ಜಗತ್ತಿಗೆ ಭಾರತ ನೀಡಿದ ಬಹುದೊಡ್ಡ ಕೊಡುಗೆ. ಈ ಕಾರ್ಯಕ್ರಮವನ್ನು ಅಪಹಾಸ್ಯ ಮಾಡುವವರಿಗೆ ಹಿಂದೂ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ಗೌರವವಿಲ್ಲ. ಹಿಂದೂಗಳನ್ನು ವಿಭಜಿಸಿದರೆ ಅವರ ಪ್ರಯತ್ನಗಳು ವಿಫಲವಾಗುತ್ತವೆ ಎಂದು ತಿಳಿಸಿದ್ದಾರೆ.

ಬಂಗಾಳದ ಬಿಜೆಪಿ ಘಟಕ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕತ್ವದ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ಸುಮಾರು 1,20,000 ವ್ಯಕ್ತಿಗಳು ನೋಂದಾಯಿಸಿಕೊಂಡಿದ್ದರು ಎಂದು ಸಂಘಟಕರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೂ ಮುನ್ನ ಸಿಂಗಾರಗೊಳ್ಳಲಿದೆ ರಾಮನ ಮೆಟ್ಟಿಲು! – ಏನಿದರ ಮಹತ್ವ? ಈ ಹೆಸರು ಯಾಕೆ ಬಂತು?

ಕೋಲ್ಕತ್ತಾದಲ್ಲಿ ಭಾನುವಾರ ನಡೆದ ‘ಲೋಕೇ ಕೊಂಥೆ ಗೀತಾ ಪಥ’ ಕಾರ್ಯಕ್ರಮಕ್ಕೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ ಅವರು, ವಿವಿಧ ಹಿನ್ನೆಲೆಯ ಜನ ಸೇರಿ ಭಗವದ್ಗೀತೆ ಪಠಣ ಮಾಡಿರುವುದು ಸಾಮಾಜಿಕ ಸೌಹಾರ್ದತೆಯನ್ನು ಹೆಚ್ಚಿಸುವುದಲ್ಲದೆ ಶಕ್ತಿ ತುಂಬಿದೆ ಎಂದು ಬಣ್ಣಿಸಿದ್ದಾರೆ.

Share This Article