‘ಮಜಾ ಭಾರತ’- ‘ಗಿಚ್ಚಿ ಗಿಲಿಗಿಲಿ’ (Gicchi Giligili) ರಿಯಾಲಿಟಿ ಶೋಗಳಲ್ಲಿ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಕಾಮತ್ (Priyanka Kamath) ಅವರು ಮದುವೆಯ ಸಂಭ್ರಮದಲ್ಲಿದ್ದಾರೆ. ಈಗಾಗಲೇ ಪ್ರಿಯಾಂಕಾ ಅವರ ಸಂಗೀತ ಕಾರ್ಯಕ್ರಮ ಮಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ನಡೆದಿದೆ. ಮದುವೆ ಬಗ್ಗೆ ನಟಿ ಪ್ರಿಯಾಂಕಾ ಎಲ್ಲಿಯೂ ಮಾಹಿತಿ ರಿವೀಲ್ ಮಾಡಿಲ್ಲ. ಈಗಾಗಲೇ ಅವರ ಮನೆಯಲ್ಲಿ ಮದುವೆ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತಿವೆ.
ಈ ಜೋಡಿ ಕಳೆದ ಜನವರಿಯಲ್ಲಿ ಪುತ್ತೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಅದಾದ ನಂತರದಲ್ಲಿ ಏಳು-ಬೀಳಿನಲ್ಲಿ ಇವರಿಬ್ಬರು ಒಟ್ಟಿಗೆ ಸಾಥ್ ನೀಡಿದ್ದರು. ಇದೀಗ ಹೊಸ ಬಾಳಿಗೆ ಕಾಲಿಡುವ ಸಂಭ್ರಮದಲ್ಲಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಗೆ ಕೋರ್ಟ್ ಶಾಕ್
View this post on Instagram
ಅಮಿತ್ ನಾಯಕ್ ಜೊತೆ ಪ್ರಿಯಾಂಕಾ ಕಾಮತ್ ಅವರ ಮದುವೆ ನಡೆಯಲಿದೆ. ಅಮಿತ್ ನಾಯಕ್ ಮೂಲತಃ ಕುಂದಾಪುರದವರು. ಕಳೆದ ಒಂದು ವರ್ಷದಿಂದ ಈ ಜೋಡಿ ಸಾಕಷ್ಟು ಕಡೆ ಪ್ರವಾಸ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿತ್ತು.
ನಟಿ ಪ್ರಿಯಾಂಕಾ ಮೂಲತಃ ಮಂಗಳೂರಿನವರು. ಅನಾರೋಗ್ಯದ ಸಮಸ್ಯೆಯಿಂದಾಗಿ ಎರಡು ಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆಗ ಅಮಿತ್ ಅವರು ಪ್ರಿಯಾಂಕಾ ನೆರವಿಗೆ ನಿಂತು ಸಂಗಾತಿಯ ಆರೈಕೆ ಮಾಡಿದ್ದರು. ಅದನ್ನು ನಟಿಯೇ ಸಾಕಷ್ಟು ಬಾರಿ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.