ಬೆಂಗಳೂರು: ನಮ್ಮ ಚಂದನವನದ ನಟರು, ಕ್ರಿಕೆಟ್ ಆಟಗಾರರು, ಪತ್ರಕರ್ತರು ಸೇರಿ ಒಟ್ಟಿಗೆ ಕ್ರಿಕೆಟ್ (Kannada Chalanchitra Cup) ಪಂದ್ಯ ಆಡುವ ಮೂಲಕ ದೇಶದಲ್ಲೇ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಶ್ಲಾಘಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಕೆಸಿಸಿ ಕಪ್ ಫೈನಲ್ ಪಂದ್ಯ ವೀಕ್ಷಿಸಿದ ಉಪಮುಖ್ಯಮಂತ್ರಿಗಳು ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಇದನ್ನೂ ಓದಿ: ಕಿಚ್ಚನ ಜೊತೆ ಕುಳಿತು ಕೆಸಿಸಿ ಕ್ರಿಕೆಟ್ ಪಂದ್ಯ ವೀಕ್ಷಿಸಿದ ಡಿಕೆ ಶಿವಕುಮಾರ್
ಅಭಿಮಾನಿಗಳ ಜತೆ ಸೇರಿ ಈ ಕೆಸಿಸಿ ಕಪ್ ಪಂದ್ಯಾವಳಿಯನ್ನು ಬಹಳ ಸಂತೋಷದಿಂದ ನಾನು ವೀಕ್ಷಣೆ ಮಾಡಿದ್ದೇನೆ. ಇಂತಹ ಪ್ರಯತ್ನಕ್ಕೆ ನಮ್ಮ ಸರ್ಕಾರ ಸದಾ ನಿಮ್ಮ ಜತೆ ಇರುತ್ತದೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಎಲ್ಲರಿಗೂ ಶುಭವಾಗಲಿ. ಕನ್ನಡ ಚಿತ್ರರಂಗ ದೇಶಕ್ಕೆ ಮಾದರಿಯಾಗುತ್ತಿದೆ. ಎಲ್ಲರಿಗೂ ಈ ಸಂದರ್ಭದಲ್ಲಿ ಶುಭಕೋರುತ್ತೇನೆ ಎಂದರು.
ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಳದ ಬಗ್ಗೆ ಕೇಳಿದಾಗ, ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮುಂಜಾಗ್ರತೆಯಿಂದ ಇರೋಣ. ಈ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿ ಹಾಗೂ ತಾಂತ್ರಿಕ ಸಮಿತಿಯಿಂದ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿಂದು 125 ಮಂದಿಗೆ ಕೊರೊನಾ ಸೋಂಕು – ಕೋವಿಡ್‌ಗೆ 3 ಬಲಿ