Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್‌ಗೂ ರಾಮಮಂದಿರಕ್ಕೂ ಏನೂ ಸಂಬಂಧವಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್‌ಎಸ್‌ಎಸ್‌ಗೂ ರಾಮಮಂದಿರಕ್ಕೂ ಏನೂ ಸಂಬಂಧವಿಲ್ಲ: ಡಿಕೆಶಿ

Bengaluru City

ಆರ್‌ಎಸ್‌ಎಸ್‌ಗೂ ರಾಮಮಂದಿರಕ್ಕೂ ಏನೂ ಸಂಬಂಧವಿಲ್ಲ: ಡಿಕೆಶಿ

Public TV
Last updated: December 28, 2023 8:04 pm
Public TV
Share
3 Min Read
dk shivakumar 2 2
SHARE

ಬೆಂಗಳೂರು: ಆರ್‌ಎಸ್‌ಎಸ್‌ಗೂ (RSS) ರಾಮಮಂದಿರಕ್ಕೂ (Ram Mandir) ಏನೂ ಸಂಬಂಧವಿಲ್ಲ. ಆದರೆ ಬಿಜೆಪಿ, ಆರ್‌ಎಸ್ಎಸ್‌ನವರನ್ನು ಬಳಸಿಕೊಂಡು ಮನೆ, ಮನೆಗೆ ತೆರಳಿ, ಅಕ್ಷತೆ ಕೊಟ್ಟು ಇಲ್ಲಿಂದಲೇ ರಾಮಮಂದಿರಕ್ಕೆ ನಮನ ಸಲ್ಲಿಸಿ ಎಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಕಿಡಿಕಾರಿದ್ದಾರೆ.

ಕೆಪಿಸಿಸಿ (KPCC) ಕಚೇರಿಯಲ್ಲಿ 139 ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಿದ್ದರೆ, ನಾವು ಜನರ ಬದುಕಿನ ಬಗ್ಗೆ ರಾಜಕಾರಣ ಮಾಡುತ್ತಿದ್ದೇವೆ. ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ನಮ್ಮ ಉದ್ದೇಶ. ಪ್ರತಿಯೊಂದು ಕುಟುಂಬದ ಹೆಣ್ಣುಮಕ್ಕಳು ನಮ್ಮ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ನನ್ನ 40 ವರ್ಷಗಳ ರಾಜಕಾರಣದಲ್ಲಿ ಇಂತಹ ಅವಕಾಶ, ಭಾಗ್ಯ ದೊರಕಿರಲಿಲ್ಲ. ನುಡಿದಂತೆ ನಡೆದಿದ್ದೇವೆ, ಇದನ್ನು ಕಾರ್ಯಕರ್ತರು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.  ಇದನ್ನೂ ಓದಿ: ಯತ್ನಾಳ್ ವಿರುದ್ಧ ಹೈಕಮಾಂಡ್‌ಗೆ ದೂರು – ಬಿಜೆಪಿ ಸಭೆಯ ನಿರ್ಣಯಗಳೇನು?

dk shivakumar 1 2

ಈ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಈ ದೇಶದ ಇತಿಹಾಸ, ಅಭಿವೃದ್ಧಿ ಪರ್ವ ಬರೆದದ್ದು ನಮ್ಮ ಹೆಗ್ಗಳಿಕೆ. ಅನ್ಯರು ಏನು ಬೇಕಾದರೂ ಹೇಳಬಹುದು, ಆದರೆ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ಅದನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ದದ್ದು ಕಾಂಗ್ರೆಸ್. ನಿರ್ಲಕ್ಷಿತ ಸಮುದಾಯಕ್ಕೆ ಧ್ವನಿ, ವಿದ್ಯಾಭ್ಯಾಸ, ಆರ್ಥಿಕ ಶಕ್ತಿ ಕೊಟ್ಟದ್ದು, ಅಣೆಕಟ್ಟುಗಳ ನಿರ್ಮಾಣ ಸೇರಿದಂತೆ ದೇಶವನ್ನು ಅಭಿವೃದ್ದಿಶೀಲವನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ತಿಳಿಸಿದರು.

ಮಹಾತ್ಮ ಗಾಂಧಿ, ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಇಂದಿರಾಗಾಂಧಿ ಸೇರಿದಂತೆ ಸಾವಿರಾರು ಜನ ಈ ದೇಶಕ್ಕೆ ತಮ್ಮ ಬದುಕನ್ನು ಸಮರ್ಪಿಸಿಕೊಂಡಿದ್ದಾರೆ. ಕಾರ್ಯಕರ್ತರ ಪರಿಶ್ರಮದಿಂದ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ನಾವು ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳ ಮೂಲಕ ಸುಮಾರು 60 ಸಾವಿರ ಕೋಟಿ ಹಣ ನೇರವಾಗಿ ಜನರಿಗೆ ಸೇರಿದೆ. ಅತ್ಯುತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಇಡೀ ದೇಶಕ್ಕೆ ಮಾದರಿಯಾಗುವಂತಹ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

dk shivakumar 3 1

 

ಹಣದುಬ್ಬರದ ಹೊತ್ತಿನಲ್ಲಿ ಐದು ಗ್ಯಾರಂಟಿಗಳನ್ನು (Congress Guarantee) ಕೊಟ್ಟು ಯಶಸ್ವಿಯಾಗಿದ್ದೇವೆ. ಕಾಂಗ್ರೆಸ್ ಚಿಹ್ನೆ ಹಸ್ತದಲ್ಲಿ ಇರುವ ಐದು ಬೆರಳಿನಂತೆ, ಚುನಾವಣೆಯಲ್ಲಿ ಐದು ಗ್ಯಾರಂಟಿಗಳು ಇರಬೇಕು ಎಂದು ನಾನು ಪಕ್ಷದ ಅಧ್ಯಕ್ಷನಾಗಿದ್ದಾಗ ತೀರ್ಮಾನ ಮಾಡಲಾಯಿತು. ಬರುವ ಜ.10 ರಂದು ಕೇಂದ್ರ ನಾಯಕರು ಹಾಗೂ ರಾಜ್ಯದ ಎಲ್ಲ ಶಾಸಕರನ್ನು ಒಳಗೊಂಡು ಲೋಕಸಭೆ ಚುನಾವಣೆ ತಯಾರಿಗೆ ಸಭೆ ನಡೆಸಲಾಗುವುದು. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡುವುದರ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಗುವುದು. ಕಾರ್ಯಕರ್ತರು ಮನೆ, ಮನೆಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಚಾರ ಮಾಡಬೇಕು ಎಂದರು.

ಪ್ರತಿಯೊಂದು ವಾರ್ಡ್, ಪಂಚಾಯತ್‌ನಲ್ಲಿ ಆಶ್ರಯ ಸಮಿತಿ ಸೇರಿದಂತೆ ಅನೇಕ ಸಮಿತಿಗಳಿದ್ದು, ಇಲ್ಲೆಲ್ಲಾ ಕಾರ್ಯಕರ್ತರಿಗೆ ಶೀಘ್ರ ಸ್ಥಾನಗಳನ್ನು ಕಲ್ಪಿಸಲಾಗುವುದು. ಎರಡು ವರ್ಷಗಳಿಗೆ ಒಮ್ಮೆ ಬದಲಾವಣೆ ಮಾಡಬೇಕು ಎನ್ನುವ ಆಲೋಚನೆ ನಮ್ಮಲ್ಲಿದೆ. ಕಾರ್ಯಕರ್ತರ ಕೆಲಸಗಳ ಬಗ್ಗೆ ನಮಗೆ ಅರಿವಿದೆ, ಅವರಿಗೆ ನ್ಯಾಯ ಒದಗಿಸಲಾಗುವುದು. ರಾಜಕಾರಣದಲ್ಲಿ ಅಧಿಕಾರ ಶಾಶ್ವತವಲ್ಲ. ಆದರೆ ಕಾರ್ಯಕರ್ತರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ ಎಂದು ನುಡಿದರು.

 

ಯಾವುದೇ ಸಮಿತಿ ರಚನೆ ಮಾಡಿದರೂ ಅದರಲ್ಲಿ ಸೇವಾದಳ, ಮಹಿಳಾ, ಯುವ, ವಿದ್ಯಾರ್ಥಿ ಮತ್ತು ಎಲ್ಲಾ ಸಮುದಾಯಗಳ ಪ್ರತಿನಿಧಿಗಳು ಇರಬೇಕು ಮತ್ತು ಎಲ್ಲರಿಗೂ ಸಮಾನ ರೀತಿಯ ಅವಕಾಶ ದೊರೆಯಬೇಕು ಎನ್ನುವುದು ಪಕ್ಷದ ಆಶಯ. ಕಾರ್ಯಕರ್ತರಿಗೆ ಪಕ್ಷ ಏನು ಕೊಟ್ಟಿದೆ ಎಂದು ಯಾರಾದರೂ ಕೇಳಿದಾಗ, ನಮ್ಮ ಪಕ್ಷ ನಮಗೆ ಉತ್ತಮ ಸ್ಥಾನಮಾನ ನೀಡಿದೆ ಎಂದು ಹೇಳುವಂತಾಗಬೇಕು. ಕರ್ನಾಟಕ ಮತ್ತು ತೆಲಂಗಾಣದ ಪ್ರಭಾವ ಇಡೀ ದೇಶಕ್ಕೆ ತಲುಪಿದೆ. ಮಿಕ್ಕ ಮೂರು ರಾಜ್ಯಗಳ ಸೋಲಿನ ಕಾರಣಗಳ ಬಗ್ಗೆ ಮತ್ತೊಮ್ಮೆ ತಿಳಿಸುತ್ತೇನೆ. ಕಾರ್ಯಕರ್ತರು ವೈಯಕ್ತಿಕವಾಗಿ ಅಧಿಕಾರ ಸಿಗಲಿಲ್ಲ ಎಂದು ಬೇಸರ ಮಾಡಿಕೊಳ್ಳುವುದು ಬೇಡ, ಪಕ್ಷ ಅಧಿಕಾರದಲ್ಲಿ ಇರುವುದಕ್ಕೆ ಸಂತೋಷಪಡಬೇಕು. ಒಂದಲ್ಲ ಒಂದು ದಿನ ಅವಕಾಶ ದೊರೆಯುತ್ತದೆ. ಕಾಂಗ್ರೆಸ್ ಪಕ್ಷ ದೇಣಿಗೆ ಸಂಗ್ರಹ ಮಾಡುತ್ತಿದ್ದು, ಪೇಟಿಎಂ ಸೇರಿದಂತೆ ಇತರೇ ಡಿಜಿಟಲ್ ಪಾವತಿ ವ್ಯವಸ್ಥೆಯ ಮೂಲಕ ದೇಣಿಗೆ ನೀಡಿ, ಪಕ್ಷದ ಬಲವರ್ದನೆಗೆ ಸಹಕರಿಸಬೇಕು ಎಂದರು.

ಐದನೇ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಉದ್ಘಾಟನಾ ಸಮಾರಂಭದಲ್ಲಿ ವಾಚಿಸಿದ್ದ ಕವನವನ್ನು ಡಿಸಿಎಂ ಮತ್ತೊಮ್ಮೆ ವಾಚಿಸಿದರು. ಐದು ಬೆರಳು ಸೇರಿ ಒಂದು ಮುಷ್ಠಿಯಾಯಿತು,  ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಅರಳಿದ ಕಮಲದ ಹೂವು ಇದನ್ನು ನೋಡಿ ಉದುರಿ ಹೋಯಿತು, ಐದು ಗ್ಯಾರಂಟಿ ನೋಡಿ ಮಹಿಳೆ ತಾನು ಹೊತ್ತ ತೆನೆಯ ಎಸೆದು ಹೋದಳು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕರ್ನಾಟಕ ಸಮೃದ್ಧವಾಯಿತು, ಕರ್ನಾಟಕ ಪ್ರಬುದ್ಧವಾಯಿತು ಎಂದು ಮತ್ತೊಮ್ಮೆ ಕವನ ವಾಚನ ಮಾಡಿದ್ದು ವಿಶೇಷವಾಗಿತ್ತು.

 

TAGGED:bjpDK Shivakumarelectionpoliticsrssಆರ್‍ಎಸ್‍ಎಸ್ಚುನಾವಣೆಡಿಕೆ ಶಿವಕುಮಾರ್ರಾಜಕೀಯ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
18 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
33 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
57 minutes ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
1 hour ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
1 hour ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?