ಕೇಂದ್ರ ಸರ್ಕಾರವೇ ರೈತರಿಂದ ನೇರವಾಗಿ ಕೊಬ್ಬರಿ ಖರೀದಿಸಲಿ – ಮೋದಿಗೆ ಹೆಚ್‌ಡಿಕೆ ಮನವಿ

Public TV
2 Min Read
HDK

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕೊಬ್ಬರಿಗೆ (Dry Coconut) ಬೆಂಬಲ ಬೆಲೆ ಹೆಚ್ಚಳ ಮಾಡಿದ ಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕೇಂದ್ರ ಸರ್ಕಾರವೇ ಕೊಬ್ಬರಿ ಖರೀದಿ ಮಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಗೆ ಸಿದ್ದರಾಮಯ್ಯ-ಮಹದೇವಪ್ಪ ಜೋಡಿ ರಸ್ತೆ ಅಂತ ಹೆಸರಿಡೋಣ: ಪ್ರತಾಪ್ ಸಿಂಹ ವೆಂಗ್ಯ

ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿಗಳಾದ ನರೇಂದ್ರ‌ ಮೋದಿ‌ (Narendra Modi) ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್‌ ಕೊಬ್ಬರಿಗೆ 300 ರೂ. ಹಾಗೂ ಉಂಡೆ ಕೊಬ್ಬರಿಗೆ 250 ರೂ. (ಪ್ರತಿ ಕ್ವಿಂಟಾಲ್‌ಗೆ) ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ ಅಂತ ತಿಳಿಸಿದ್ದಾರೆ.

ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರ ಅವರ ನೇತೃತ್ವದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬ್ಬರಿ ಬೆಳೆಯುವ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಪ್ರಧಾನಿಗಳು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

Dry Coconut

ಸದ್ಯ ತೆಂಗು ಬೆಳೆಗಾರರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡುಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕೊನೇಪಕ್ಷ ರಾಜ್ಯದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬ ಖರೀದಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ; ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ – ಮನೆಯಲ್ಲಿ ಸಿಕ್ತು 2019 ರ ಕ್ಯಾಲೆಂಡರ್‌

Share This Article