ಅಯೋಧ್ಯೆ: ಜನವರಿ 22ಕ್ಕೆ ಅಯೋಧ್ಯೆ (Ayodhya) ಶ್ರೀರಾಮ ಮಂದಿರ (Ram Mandira) ಲೋಕಾರ್ಪಣೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಶನಿವಾರ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.
ಅಯೋಧ್ಯೆ, ಉತ್ತರ ಪ್ರದೇಶಕ್ಕೆ ಸಂಬಂಧಿಸಿದ 15,700 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರಲ್ಲಿ, ರಸ್ತೆ, ಹೆದ್ದಾರಿ, ವಿಮಾನ, ರೈಲ್ವೇ ಸೇರಿದಂತೆ ಮೂಲಭೂತ ಸೌಕರ್ಯಗಳ ಯೋಜನೆಗಳು ಒಳಗೊಂಡಿವೆ. ಇದನ್ನೂ ಓದಿ: Ram Mandir- ರಾಮಮಂದಿರ ಉದ್ಘಾಟನೆಯ ಕೇಂದ್ರಬಿಂದು ಗರ್ಭಗುಡಿ ವಿಶೇಷತೆ ನಿಮಗೆಷ್ಟು ಗೊತ್ತು?
ಶನಿವಾರ ಉದ್ಘಾಟನೆಯಾಗಲಿರುವ ವಿಮಾನ ನಿಲ್ದಾಣಕ್ಕೆ ಮೊದಲು ಶ್ರೀರಾಮ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ (Maharishi Valmiki International Airport) ಎಂದು ಹೆಸರು ಇಡಲಾಗಿತ್ತು. ಆದರೆ ಈಗ ಮಹಾಕಾವ್ಯ ರಾಮಾಯಣದ ಸೃಷ್ಟಿಕರ್ತ ಮಹರ್ಷಿ ವಾಲ್ಮೀಕಿ ಇಂಟರ್‌ನ್ಯಾಷನಲ್ ವಿಮಾನ ನಿಲ್ದಾಣ ಎಂದು ಹೆಸರನ್ನು ಇಡಲಾಗಿದೆ.
ವಿಮಾನ ನಿಲ್ದಾಣದ ವಿಶೇಷತೆ ಏನು?
ಅಯೋಧ್ಯೆ ನಗರದಿಂದ 15 ಕಿ.ಮೀ. ದೂರದಲ್ಲಿರುವ ವಿಮಾನ ನಿಲ್ದಾಣ 6,500 ಚದರ ಮೀಟರ್ ವ್ಯಾಪ್ತಿಯನ್ನು ಹೊಂದಿದೆ. ವಾರ್ಷಿಕ 10 ಲಕ್ಷ ಪ್ರಯಾಣಿಕರ ಸಾಮರ್ಥ್ಯ ಹೊಂದಿದ್ದು ಏರ್‌ಬಸ್-ಬೋಯಿಂಗ್‌ನಂತಹ ದೈತ್ಯ ವಿಮಾನಗಳು ಸಂಚರಿಸಬಹುದಾದ ರನ್‌ವೇ ನಿರ್ಮಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಿಂದ ಅಯೋಧ್ಯೆಗೆ ನೇರ ಏರ್ ಇಂಡಿಯಾ ವಿಮಾನ
ಉದ್ಘಾಟನೆಯಂದು 2 ವಿಮಾನ ಹಾರಾಟ ನಡೆಸುವ ಸಾಧ್ಯತೆಯಿದ್ದು, ಜ.6ರಿಂದ ವಿಮಾನಗಳ ಸಂಚಾರ ಆರಂಭವಾಗಲಿದೆ. ಎಲ್‌ಇಡಿ, ಮಳೆನೀರು ಸಂಗ್ರಹ, ಕಾರಂಜಿಗಳು, ಜಲಸಂಸ್ಕರಣ ಘಟಕ, ಕೊಳಚೆನೀರು ಸಂಸ್ಕರಣ ಘಟಕ, ಸೋಲಾರ್ ಪವರ್ ಪ್ಲಾಂಟ್ ಸೇರಿದಂತೆ 5 ಸ್ಟಾರ್ ದರ್ಜೆ ಸೌಲಭ್ಯವನ್ನು ಹೊಂದಿದೆ.
ರೈಲು ನಿಲ್ದಾಣದ ವಿಶೇಷತೆ ಏನು?
ಏರ್‌ಪೋರ್ಟ್ ವ್ಯವಸ್ಥೆಯ ರೈಲ್ವೇ ನಿಲ್ದಾಣದಂತಿರುವ ಅಯೋಧ್ಯಧಾಮ ಜಂಕ್ಷನ್ (Ayodhya Dham Junction) ಸಂಪೂರ್ಣ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗಿದೆ. ರಾಮ ಮಂದಿರದಿಂದ 2.1 ಕಿ.ಮೀ. ದೂರದಲ್ಲಿ ನಿರ್ಮಾಣಗೊಂಡಿದೆ. ಮೊದಲ ಹಂತದಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಕೆಲಸ ಕಾರ್ಯ ನಡೆದಿದ್ದು, 10,000 ಚದರ ಮೀಟರ್ ವಿಸ್ತೀರ್ಣ ಹೊಂದಿದೆ.
3 ಪ್ಲಾಟ್ ಫಾರಂನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗಿದೆ. 3 ಅಂತಸ್ತಿನ ಕಟ್ಟಡ, ಲಿಫ್ಟ್, ಎಸ್ಕಲೇಟರ್, ಮಕ್ಕಳ ಆರೈಕೆ ಕೊಠಡಿ, ಫುಡ್ ಪ್ಲಾಜಾ, ಪೂಜಾ ಪರಿಕರ ಅಂಗಡಿಗಳಿವೆ. 2ನೇ ಹಂತದಲ್ಲಿ 480 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯಲಿದೆ.