ಅಯೋಧ್ಯೆಯಲ್ಲಿ ಮಕ್ಕಳಿಬ್ಬರ ಭೇಟಿಯಾಗಿ ಸೆಲ್ಫಿ, ಆಟೋಗ್ರಾಫ್‌ ನೀಡಿದ ಪ್ರಧಾನಿ

Public TV
1 Min Read
NARENDRA MODI 3

ಅಯೋಧ್ಯೆ: ಇಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿರುವ ಪ್ರಧಾನಿ ಮೋದಿಯವರು (Narendra Modi) ಇಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಬ್ಬರು ಮಕ್ಕಳನ್ನು ಭೇಟಿಯಾಗಿದ್ದಾರೆ.

ಪ್ರಧಾನಿಯವರು ಇಬ್ಬರು ಮಕ್ಕಳನ್ನು ಭೇಟಿಯಾಗಿ ಅವರೊಂದಿಗೆ ಸೆಲ್ಫಿ (Selfie) ತೆಗೆದುಕೊಂಡರು. ಬಳಿಕ ಅವರಿಗೆ ಆಟೋಗ್ರಾಫ್ ಕೂಡ ನೀಡಿದರು. ಅಲ್ಲದೆ ಇದೇ ವೇಳೆ ಬಾಲಕನೊಬ್ಬ ತಾನು ಬಿಡಿಸಿದ ರಾಮಮಂದಿರದ ಚಿತ್ರವನ್ನು ಪ್ರಧಾನಿಯವರಿಗೆ ತೋರಿಸಿದ್ದು, ಮೋದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೋದಿ ಜೊತೆ ಸೆಲ್ಫಿ ತೆಗೆದುಕೊಂಡು ಬಳಿಕ ಮಕ್ಕಳು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: Modi In Ayodhya: ಪ್ರಧಾನಿ ಮೋದಿಯಿಂದ ʻಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣʼ ಲೋಕಾರ್ಪಣೆ

ಇಂದು ಬೆಳಗ್ಗೆ 10.45ರ ಸುಮಾರಿಗೆ ಅಯೋಧ್ಯೆಗೆ ಆಗಮಿಸಿರುವ ಪ್ರಧಾನಿ ಮೋದಿಯವರು ಮೊದಲು ರೋಡ್‌ ಶೋ ನಡೆಸಿದರು. ಬಳಿಕ ರೈಲ್ವೆ ನಿಲ್ದಾಣ ಉದ್ಘಾಟನೆ ಮಾಡಿದರು. ಈ ವೇಳೆ ಕರ್ನಾಟಕದ 3 ರೈಲು ಸೇರಿ 8 ಹೊಸ ರೈಲುಗಳಿಗೆ ಮೋದಿ ಹಸಿರು ನಿಶಾನೆ ತೋರಿದರು. ಅದಾದ ಬಳಿಕ ವಿಮಾನ ನಿಲ್ದಾಣ ಉದ್ಘಾಟಿಸಿದರು.

Share This Article