ನಮ್ಮನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ: ವಿಕ್ರಂ ಸಿಂಹ

Public TV
2 Min Read
Vikram Simha

– ಯಾರ‍್ಯಾರ ಕೈವಾಡವಿದೆ ಎಲ್ಲವನ್ನೂ ಹೇಳ್ತೀನಿ

ಹಾಸನ: ಮರಗಳ್ಳತನ ಪ್ರಕರಣದಲ್ಲಿ ತನ್ನನ್ನು ಪೊಲೀಸರು ಬಂಧಿಸಿರುವುದಕ್ಕೆ ವಿಕ್ರಂ ಸಿಂಹ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಅಣ್ಣನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಎಷ್ಟು ಪಿತೂರಿ ಮಾಡುತ್ತಿದ್ದಾರೆ ಎನ್ನುವುದನ್ನು ಬಹಿರಂಗವಾಗಿಯೇ ಹೇಳುತ್ತೇನೆ ಎಂದು ವಿಕ್ರಂ ಸಿಂಹ (Vikram Simha) ಹೇಳಿಕೆ ನೀಡಿದ್ದಾರೆ.

ಹಾಸನದ ಹಿಮ್ಸ್‌ನಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿಕ್ರಂ ಸಿಂಹ ಅಸಮಾಧಾನ ಹೊರಹಾಕಿದ್ದಾರೆ. ತುಂಬಾ ವಿಷಯಗಳಿವೆ. ಕಾಲ ಬರಲಿ ಎಲ್ಲಾ ಹೇಳ್ತೇನೆ. ಎಷ್ಟು ಪಿತೂರಿ ಮಾಡುತ್ತಿದ್ದಾರೆ ಎನ್ನುವುದನ್ನ ಬಹಿರಂಗವಾಗಿಯೇ ಹೇಳ್ತೀನಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಮಗನ ಎಂಪಿ ಮಾಡಲು ನನ್ನ ಮೇಲೆ ಆರೋಪ ಮಾಡ್ತಿದ್ದೀರಿ: ಸಿದ್ದು ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ

pratap simha

ಯಾರ‍್ಯಾರ ಕೈವಾಡವಿದೆ ಎಲ್ಲವನ್ನೂ ಹೇಳ್ತೇನೆ. ಯಾರನ್ನ ನೀವು ನಿಷ್ಠಾವಂತ ಅಧಿಕಾರಿ ಎನ್ನುತ್ತಿದ್ದೀರಿ? ಅವರ ನಿಷ್ಠೆ ಯಾರಿಗೆ ಅನ್ನುವುದನ್ನು ಹೇಳುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ನಮ್ಮನ್ನ ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಅಣ್ಣನನ್ನು ಟಾರ್ಗೆಟ್ ಮಾಡ್ತಿದ್ದಾರೆ. ಇದೆಲ್ಲಾ ವ್ಯವಸ್ಥಿತವಾಗಿಯೇ ಆಗ್ತಾ ಇದೆ. ಯಾರು ನಿಷ್ಠಾವಂತ ಅಧಿಕಾರಿ ಎನ್ನುತ್ತಿದ್ದೀರಿ ಅವರ ಬಗ್ಗೆ ಹೇಳ್ತೇನೆ. ಮಾಧ್ಯಮದ ಮುಂದೆ ಬರುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಹೋದರನ ಬಂಧನ; ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್‌ ಸಿಂಹ

Pratap Simha and Vikram Simha

ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಏನಿದು ಪ್ರಕರಣ?
ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿದ್ದು, ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಿದಿರುವ ಮರಗಳನ್ನು ಅರಣ್ಯ ಇಲಾಖೆ ಡಿಪೊದಲ್ಲಿ ಸಂಗ್ರಹಿಸಲಾಗಿದೆ. ಇದನ್ನೂ ಓದಿ: ವಿಕ್ರಂ ಸಿಂಹ ಬಂಧನದಿಂದ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ – ಕಾಂಗ್ರೆಸ್ ಟ್ವೀಟ್

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್‌ ಲೇವಡಿ ಮಾಡಿತ್ತು.

Share This Article