ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ

Public TV
1 Min Read
Ayodhya Ram Mandir Temple

ಲಕ್ನೋ: ಅಯೋಧ್ಯೆ ರಾಮಮಂದಿರವನ್ನು (Ayodhya Ram Mandir) ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಉತ್ತರ ಪ್ರದೇಶದ (Uttar Pradesh) ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ತಹರ್ ಸಿಂಗ್ ಹಾಗೂ ಓಂಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್‍ನಿಂದ ಆರೋಪಿಗಳನ್ನು ವಿಶೇಷ ಪೊಲೀಸ್ ಪಡೆ ಬಂಧಿಸಿದೆ. ಆರೋಪಿಗಳು ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಮಲಲ್ಲಾ ಮೂರ್ತಿ ಆಯ್ಕೆ ಅಂತಿಮವಾಗಿಲ್ಲ – ಟ್ರಸ್ಟ್‌ನಿಂದ ಸ್ಪಷ್ಟನೆ

ಆರೋಪಿಗಳು ಎಕ್ಸ್‌ನಲ್ಲಿ, ಆದಿತ್ಯನಾಥ್ (Yogi Adityanath), ಎಸ್‍ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಬೆದರಿಕೆ ಹಾಕಿದ್ದರು. ಬೆದರಿಕೆ ಬಂದ ಎಕ್ಸ್ ಖಾತೆ ಹಾಗೂ ಇಮೇಲ್ ಐಡಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಬಳಿಕ ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾನೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂಬುದು ತಿಳಿದು ಬಂದಿದೆ.

ಎಸ್‍ಟಿಎಫ್ ಅಧಿಕಾರಿಗಳು ಅರೋಪಿಗಳ ವಿರುದ್ಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಅಕ್ಕಿ, ತರಕಾರಿ, ಸಾಂಬಾರ್ ಪದಾರ್ಥಗಳ ಅರ್ಪಣೆ – ಪ್ರಾಣಪ್ರತಿಷ್ಠೆಗೆ ಶ್ರೀರಾಮ ಭಕ್ತರ ಕಾಣಿಕೆ

Share This Article