ಫೆಬ್ರವರಿಯಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಎಂಗೇಜ್‌ಮೆಂಟ್

Public TV
1 Min Read
rashmika mandanna 1 2

ನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ವಿಜಯ್ ದೇವರಕೊಂಡ (Vijay Devarakonda) ಹೆಸರು ತಳುಕು ಹಾಕಿಕೊಂಡಿರೋದು ಇದೇ ಮೊದಲ ಬಾರಿ ಏನಲ್ಲ. ಆದರೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ಎಂಗೇಜ್‌ಮೆಂಟ್ (Engagement) ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ:ಮುತ್ತಣ್ಣನಾದ ಡೈನಾಮಿಕ್ ಪ್ರಣಂ ದೇವರಾಜ್

rashmika mandanna 9

‘ಗೀತ ಗೋವಿಂದಂ’ ಜೋಡಿ ಡೇಟಿಂಗ್ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಇಬ್ಬರೂ ಜೊತೆಯಾಗಿರುವಾಗ ಸಾಕಷ್ಟು ಬಾರಿ ಪಾಪರಾಜಿಗಳ ಕಣ್ಣಿಗೆ ಒಟ್ಟಿಗೆ ತಗ್ಲಾಕೊಂಡಿದ್ದಾರೆ. ಆದರೂ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತಗೊಳಿಸಿಲ್ಲ.

rashmika mandanna

ಈಗ ಹರಿದಾಡುತ್ತಿರೋ ಹೊಸ ಸುದ್ದಿ ಏನಪ್ಪಾ ಅಂದರೆ, ಇದೇ ಫೆಬ್ರವರಿ ಎರಡನೇ ವಾರದಲ್ಲಿ ವಿಜಯ್- ರಶ್ಮಿಕಾ ಜೋಡಿ ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರೂ ಇದರ ಬಗ್ಗೆ ತುಟಿಕ್ ಪಿಟಿಕ್ ಎಂದಿಲ್ಲ. ಅಷ್ಟಕ್ಕೂ ಈ ಸುದ್ದಿ ನಿಜನಾ? ಅಥವಾ ಗಾಸಿಪ್? ಇಬ್ಬರ ಕಡೆಯಿಂದ ಸ್ಪಷ್ಟನೆ ಸಿಗುವವರೆಗೂ ಕಾಯಬೇಕಿದೆ.

ವಿಜಯ್ ನಟನೆಯ ‘ಫ್ಯಾಮಿಲಿ ಸ್ಟಾರ್’ (Family Star) ಸಿನಿಮಾ ಈ ವರ್ಷ ತೆರೆಗೆ ಬರಲಿದೆ. ಪುಷ್ಪ 2 ಚಿತ್ರ, ರೈನ್‌ಬೋ, ಚಾವಾ ಸಿನಿಮಾಗಳು ರಶ್ಮಿಕಾ ಕೈಯಲ್ಲಿವೆ.

Share This Article