ನಟ ಅನೀಶ್ ತೇಜೇಶ್ವರ್ (Anish Tejeshwar) ನಟನೆಯ ‘ನಮ್ ಏರಿಯಾಲಿ ಒಂದ್ ದಿನ’, ‘ಪೊಲೀಸ್ ಕ್ವಾಟ್ರಸ್’, ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿದ್ದಾರೆ. ಅನೀಶ್‌ಗೆ ಇಂದು (ಜ.12) ಜನ್ಮದಿನದ ಸಂಭ್ರಮ. ಬರ್ತಡೇ ಸ್ಪೆಷಲ್ ಆಗಿ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾದ ಮೊದಲ ಹಾಡನ್ನು ಅನಾವರಣ ಮಾಡಲಾಗಿದೆ.
‘ಆರಾಮ್ ಅರವಿಂದ ಸ್ವಾಮಿ’ ಟೈಟಲ್ ಟ್ರ‍್ಯಾಕ್‌ಗೆ ನಾಗಾರ್ಜುನ್ ಶರ್ಮಾ ಪದಪುಂಜ ಬರೆದಿದ್ದು, ನಿಶಾನ್ ರೈ ಕಂಠ ಕುಣಿಸಿದ್ದಾರೆ. ಅರ್ಜುನ್ ಜನ್ಯ ಮ್ಯೂಸಿಕ್ ಹಾಡಿನ ಕಿಕ್ ಏರಿಸಿದೆ. ನಾಯಕನ ಗುಣವನ್ನು ವರ್ಣಿಸುವ ಈ ಟೈಟಲ್ ಟ್ರ‍್ಯಾಕ್ ಅನೀಶ್ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಬಾಬಾ ಭಾಸ್ಕರ್ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಹಾಡು ಮೂಡಿ ಬಂದಿದೆ. ಇದನ್ನೂ ಓದಿ:ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ‘ಸಲಾರ್’ ಟೀಮ್
ತನ್ನ ಪ್ರಮೋಷನ್ ಕಂಟೆಂಟ್‌ನಿಂದಲೇ ಈಗಾಗಲೇ ಸದ್ದು ಮಾಡುತ್ತಿರುವ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾಗೆ ಅಭಿಷೇಕ್ ಶೆಟ್ಟಿ (Abhishek Shetty) ಆ್ಯಕ್ಷನ್ ಕಟ್ ಹೇಳಿದ್ದಾರೆ. ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಅವರ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾವಾಗಿದ್ದು, ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ‘ಆರಾಮ್ ಅರವಿಂದ ಸ್ವಾಮಿ’ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದ್ದಾನೆ.
ಅನೀಶ್ ತೇಜೇಶ್ವರ್‌ಗೆ ಜೋಡಿಯಾಗಿ ಮಿಲನ ನಾಗರಾಜ್ (Milana Nagaraj)- ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ ಚಿತ್ರಕ್ಕಿದೆ.